ವಿಜಯಪುರ: ನಗರ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಹಾಪೌರ ಆಯ್ಕೆಗೆ ಅಕ್ಟೋಬರ್ ೩೦ರಂದು ನಿಗದಿಗೊಳಿಸಲಾದ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣವರ ತಿಳಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳ ಮೀಸಲಾತಿಯನ್ನು ಪ್ರಶ್ನಿಸಿ ಕಲಬುರಗಿ ಉಚ್ಛ ನ್ಯಾಯಾಲಯದಲ್ಲಿ ದಾಖಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ದಿನಾಂಕ : ೨೭-೧೦-೨೦೨೩ ರಂದು ಪ್ರಕರಣದ ವಿಚಾರಣೆ ನಡೆಸಿದ ಉಚ್ಛ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ದಿನಾಂಕ : ೩೦-೧೦-೨೦೨೩ ರಂದು ಮುಂದೂಡಿದ ಹಿನ್ನಲೆಯಲ್ಲಿ ಪ್ರಕರಣ ಇತ್ಯರ್ಥವಾಗುವರೆಗೆ ಚುನಾವಣೆ ನಡೆಸಲು ಯಾವುದೇ ಕ್ರಮ ತೆಗೆದುಕೊಳ್ಳದಂತೆ ಕಲುಬುರಗಿ ಪೀಠದ ಹೆಚ್ಚುವರಿ ಅಡ್ವೋಕೆಟ್ ಜನರಲ್ ಇವರು ತಿಳಿಸಿರುವುದರಿಂದ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Related Posts
Add A Comment