Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ
(ರಾಜ್ಯ ) ಜಿಲ್ಲೆ

ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಪರ ನಿರ್ದೇಶಕರ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ, ಉ.ಕ ಸಹಾಯಕ ನಿರ್ದೇಶಕ ಡಾ.ಸಂಪತ್ ಗುಣಾರಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ, ರಕ್ತಹೀನತೆ ಹಾಗೂ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇದೆ. ಕರುಳಿನಲ್ಲಿರುವ ಜಂತುಹುಳುಗಳು ಮನುಷ್ಯನ ಆಹಾರ ಮತ್ತು ರಕ್ತದಲ್ಲಿನ ಪೌಷ್ಟಿಕಾಂಶವನ್ನು ಹಂಚಿಕೊಳ್ಳುವುದರಿಂದ ಈ ಸಮಸ್ಯೆಗಳು ಉಂಟಾಗುತ್ತವೆ ಎಂದು ಅಪರ ನಿರ್ದೇಶಕರ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ, ಉತ್ತರ ಕರ್ನಾಟಕದ ಸಹಾಯಕ ನಿರ್ದೇಶಕ ಡಾ. ಸಂಪತ್ ಗುಣಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಜಯಪುರ ನಗರದ ಅಲ್ ಹಸ್ನಾತ್ ಉರ್ದು ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಗರದ ಹಬೀಬ್ ನಗರದಲ್ಲಿರುವ ಅಲ್ ಹಸ್ನಾತ್ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬರಿಗಾಲಿನಲ್ಲಿ ಹೊರಗಡೆ ಓಡಾಡುವುದು, ಬಯಲು ಶೌಚ, ಸ್ವಚ್ಛತೆಯ ಅಸಮರ್ಪಕ ನಿರ್ವಹಣೆ, ಅಶುದ್ಧ ನೀರು ಹಾಗೂ ಕಲುಷಿತ ಆಹಾರ ಸೇವನೆಯಿಂದ ಜಂತುಹುಳುಗಳು ದೇಹವನ್ನು ಪ್ರವೇಶಿಸುತ್ತವೆ. ಆದ್ದರಿಂದ ಮಕ್ಕಳು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಉತ್ತಮ ಆರೋಗ್ಯಕರ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂತೋಷ ಶೆಟ್ಟಿ ಮಾತನಾಡಿ, ಜಿಲ್ಲೆಯಾದ್ಯಂತ ಆ.೧೦ರಂದು ಎಲ್ಲ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ೧ರಿಂದ ೧೯ ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಗುತ್ತಿದೆ. ಶಾಲೆಗೆ ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಮಾತ್ರೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಮಾತ್ರೆ ಪಡೆಯಲು ಸಾಧ್ಯವಾಗದ ಮಕ್ಕಳಿಗೆ ಆ.೧೭ರಂದು ಮಾಪ್-ಅಪ್ ದಿನದಂದು ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುವುದು. ಆದ್ದರಿಂದ ಎಲ್ಲ ಅರ್ಹ ಮಕ್ಕಳು ತಪ್ಪದೇ ಮಾತ್ರೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಲ್ ಹಸ್ನಾತ್ ಉರ್ದು ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಸ್. ಹರಿಯಾಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸೌಮ್ಯ ಶಿಂಧೆ, ಜೀಯಾ ಅವಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಚಲವಾದಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಹಾದೇವ ನಿಲಂಗಿ, ಆರ್‌ಕೆಎಸ್‌ಕೆ ಜಿಲ್ಲಾ ಸಂಯೋಜಕಿ ಸಾವಿತ್ರಿ ಹಿಪ್ಪರಗಿ, ಆರೋಗ್ಯ ಇಲಾಖೆ ಸಿಬ್ಬಂದಿ, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.