ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಜಿಲ್ಲೆಯ ಏಳು ಬ್ಲಾಕ್ ಸಂಪನ್ಮೂಲ ಕೇಂದ್ರಗಳಿಗೆ ತಲಾ ಒಬ್ಬರಂತೆ ಒಟ್ಟು ೭ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ (Academic Resource Person for Mental Health) ಹುದ್ದೆಗೆ ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯದಲ್ಲಿ ಎಂ.ಎ./ಎಂ.ಎಸ್ಸಿ ಪದವಿ ಹೊಂದಿರಬೇಕು. ಅಲ್ಲದೇ ಶಾಲಾ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹಾಗೂ ಕನ್ನಡ, ಇಂಗ್ಲಿಷ್ ಭಾಷಾ ಜ್ಞಾನ ಮತ್ತು ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ, ಎರಡು ಪ್ರತಿಗಳಲ್ಲಿ ಆಫ್‌ಲೈನ್ ಮೂಲಕ ಆ.೧೮ರ ಸಂಜೆ ೪ ಗಂಟೆಯೊಳಗಾಗಿ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ವಿಜಯಪುರ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ೯೪೪೮೯೯೯೩೩೧, ೯೦೦೮೨೪೦೦೭೨, ೯೯೭೨೩೬೨೪೦೩ ಹಾಗೂ ೯೯೪೫೩೩೨೩೬೪ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
