ಸಿಂದಗಿ ಪಿಕೆಪಿಸಿಎಆರ್‌ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಕೆಪಿಸಿಎಆರ್‌ಡಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವು ಎಸ್.ಹತ್ತಿ ಹಾಗೂ ಉಪಾಧ್ಯಕ್ಷರಾಗಿ ಸಿದ್ದಾರ್ಥ ರೂಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿಂದಗಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷ ಶಿವು ಎಸ್.ಹತ್ತಿ, ಉಪಾಧ್ಯಕ್ಷ ಸಿದ್ದಾರ್ಥ ರೂಗಿ ಹಾಗೂ ಸದಸ್ಯರನ್ನು ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಮಾತನಾಡಿ, ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಬ್ಯಾಂಕ್ ಮತ್ತಷ್ಟು ಅಭಿವೃದ್ಧಿ ಹೊಂದಿ, ತಾಲೂಕಿನ ರೈತರು ಹಾಗೂ ಗ್ರಾಮೀಣ ಜನರ ಆರ್ಥಿಕ ಪ್ರಗತಿಗೆ ಪರಿಣಾಮಕಾರಿಯಾಗಿ ಶ್ರಮಿಸಲಿ ಎಂದು ಶಾಸಕ ಅಶೋಕ ಮನಗೂಳಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಆಲಮೇಲ ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಅಶೋಕ ಕೊಳಾರಿ, ಕುಮಾರ ದೇಸಾಯಿ, ಅರವಿಂದ ಹಂಗರಗಿ, ವಾಯ್.ಸಿ.ಮಯೂರ, ಚನ್ನು ವಾರದ, ಶಶಿಧರ ಗಾಯಕವಾಡ, ಬ್ಯಾಂಕಿನ ನಿರ್ದೇಶಕರು, ಪ್ರಮುಖ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

