ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ವಿಜಯಪುರ ಜಿಲ್ಲಾ ಘಟಕದಿಂದ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಲಿಂಗಾಯತ ಧರ್ಮ ಮಾನ್ಯತೆ ಮತ್ತು ಅಲ್ಪಸಂಖ್ಯಾತ ಸ್ಥಾನಮಾನ ಬೇಡಿಕೆಗೆ ಆಗ್ರಹಿಸಿ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಘಟನೆ ಗೌರವಾಧ್ಯಕ್ಷೆ ಡಾ. ಸರಸ್ವತಿ ಪಾಟೀಲ ಅವರ ಸಹಕಾರ, ನೇತೃತ್ವದಲ್ಲಿ, ಸಂಶೋಧನಾ ಕೇಂದ್ರ, ಪುಣೆಯ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಜಿಲ್ಲಾಧಿಕಾರಿಗಳನ್ನು ಆ.10 ರಂದು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಿದ್ದಪ್ಪ ಪಡನಾಡ, ಅಧ್ಯಕ್ಷ ಆರ್.ಎಸ್. ಬಿರಾದಾರ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರೇಣುಕಾ ಪಾಟೀಲ, ಡಾ. ಶಾರದಾಮಣಿ ಹುನಶಾಳ, ರತ್ನಕ್ಕ ಬಿರಾದಾರ, ರೇಖಾ ಬಿರಾದಾರ, ಶ್ರೀಮತಿ ಸರೋಜಾ ಪಾಟೀಲ ಮತ್ತು ಹಲವಾರು ಬಸವಾಭಿಮಾನಿಗಳು ಉಪಸ್ಥಿತರಿದ್ದರು.

