ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಆ. ೧೪ ಮತ್ತು ೧೫ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಆ. ೧೪ರಂದು ಸಂಜೆ ೬ ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಲಬುರಗಿಗೆ ಪ್ರಯಾಣ ಬೆಳೆಸುವರು. ರಾತ್ರಿ ೭:೩೦ ಕ್ಕೆ ಕಲಬುರಗಿಯಿಂದ ರಸ್ತೆ ಮಾರ್ಗವಾಗಿ ವಿಜಯಪುರಕ್ಕೆ ಆಗಮಿಸುವರು.
ಆ. ೧೫ರಂದು ಬೆಳಿಗ್ಗೆ ೯ ಕ್ಕೆ ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-೨ ರಡಿ ಅರ್ಕಾಟ್ ದರ್ಗಾ, ಖಾದಿ ಗ್ರಾಮೊದ್ಯೋಗ ವೃತ್ತ ಹಾಗೂ ತಾಜೋದ್ದೀನ್ ಹೋಟೆಲ್ ಬಸ್ ನಿಲ್ದಾಣದ ಬಳಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು.
ಮಧ್ಯಾಹ್ನ ೧ ಗಂಟೆಗೆ ಯತ್ನಾಳದಲ್ಲಿ ಯತ್ನಾಳ-ಜಾಲಗೇರಿ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವರು. ಮಧ್ಯಾಹ್ನ ೧:೩೦ಕ್ಕೆ ಡೋಕಳೇವಾಡಿಯಲ್ಲಿ ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವರು. ಸಂಜೆ ೪ ಗಂಟೆಗೆ ಕಾತ್ರಾಳದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಸ್ಥೆಯನ್ನು ಉದ್ಘಾಟಿಸುವರು. ಸಂಜೆ ೬ ಗಂಟೆಗೆ ಶಿರಬೂರ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಸ್ಥೆ ನಿಯಮಿತ ಉದ್ಘಾಟಿಸಿ, ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

