ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವ ಅಂಗಾಂಗ ದಾನ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ರಚನಾ ಶರೀರ ವಿಭಾಗದ ವತಿಯಿಂದ ಬುಧವಾರ ಅಂತರ್- ಮಹಾವಿದ್ಯಾಲಯದಲ್ಲಿ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆರ್.ಕೆ. ಎಂ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಬಿ.ಎನ್.ಎಂ ನಾಗೂರ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಹಾಗೂ ಲುಕ್ಮಾನ್ ಯುನಾನಿ ಮೆಡಿಕಲ್ ಕಾಲೇಜು ಸೇರಿದಂತೆ ನಾಲ್ಕು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಒಟ್ಟು 22 ತಂಡಗಳು ಪಾಲ್ಗೊಂಡಿದ್ದವು.
ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಆಯೋಜನಾ ಕಾರ್ಯದರ್ಶಿ ಡಾ. ಶಿವಕುಮಾರ ಯರಗಲ, ಡಾ. ರಫಿಯಾಬಾನು ತಾಳಿಕೋಟಿ, ಸಹ-ಆಯೋಜನಾ ಕಾರ್ಯದರ್ಶಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ ಡೀಮ್ಡ್ ಟುಬಿ ಯೂನಿವರ್ಸಿಟಿಯ ರಚನಾ ಶರೀರ ವಿಭಾಗದ ಡಾ. ಆರ್. ಎಸ್. ಬುಲಗೌಡ ಹಾಗೂ ಡಾ. ಖುರೇಷಿ ಅವರು ತೀರ್ಪುಗಾರರಾಗಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಆರ್. ಎಸ್. ಬುಲಗೌಡ, ದೇಹದ ಮೇಲೆ ಆಯಾ ಅಂಗಗಳನ್ನು ರಚಿಸುವದರ ಮೂಲಕ ವಿದ್ಯಾರ್ಥಿಗಳ ರಚನಾ ಶರೀರಶಾಸ್ತ್ರದ ಜ್ಞಾನ, ಸೃಜನಶೀಲತೆ, ತಂಡದ ಕಾರ್ಯಕ್ಷಮತೆ ಹಾಗೂ ಪ್ರಾಯೋಗಿಕ ಕಲಿಕೆಯನ್ನು ಉತ್ತೇಜಿಸುವುದು ಈ ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಈ ಸ್ಪರ್ಧೇಯ ವಿಜೇತರಿಗೆ ಬಹುಮಾನವನ್ನು ಮುಂದಿನ ಕಾರ್ಯಕ್ರಮದಲ್ಲಿ ಪ್ರಕಟಿಸಿ ಕೊಡಲಾಗುವುದು ಕಾಲೇಜಿನ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

