ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ವಿಜಯಪುರ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಲಂ ೧೬ರಡಿ ಆ.೧೩ ರಂದು ವಿಜಯಪುರ ನಗರದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ಓರ್ವ ಬಾಲಕಾರ್ಮಿಕ ಮಗುವನ್ನು ರಕ್ಷಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಓರ್ವ ಬಾಲಕಾರ್ಮಿಕ ಮಗುವನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯ ಉದ್ದೇಶದಿಂದ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು.
ಮಕ್ಕಳನ್ನು ಬಾಲಕಾರ್ಮಿಕರಾಗಿ ನೇಮಿಸಿಕೊಳ್ಳದಂತೆ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
