ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹು.ವಿ.ಸ.ಕಂ.ನಿ. ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವತಿಯಿಂದ ರೈತರು ಹಾಗೂ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ.
ದಿನಾಂಕ ಆ.೧೭ರಂದು ಮಧ್ಯಾಹ್ನ ೩ ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ.
ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ರೈತರು, ಗ್ರಾಹಕರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳುವಂತೆ ಕೋರಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಉಪಯುಬಾಗ ಇವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
