ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕೃಷಿ ಕೇಂದ್ರದಿಂದ ಜಿಲ್ಲೆಯ ರೈತರು ಹಾಗೂ ರೈತ ಮಹಿಳೆಯರಿಗಾಗಿ ನೈಸರ್ಗಿಕ ಕೃಷಿ ಪದ್ಧತಿಗಳು, ತತ್ವಗಳು, ತಂತ್ರಜ್ಞಾನಗಳು ಹಾಗೂ ಅನುಷ್ಠಾನದ ವಿಧಾನಗಳು ಕುರಿತು ಒಂದು ದಿನದ ಆನ್ ಲೈನ್ ತರಬೇತಿ ಕಾರ್ಯಕ್ರಮ ಆ. ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಧಾರವಾಡ ಕೃಷಿ ವಿವಿಯ ಬೇಸಾಯ ಶಾಸ್ತ್ರ ವಿಭಾಗದ ಹಿರಿಯ ವಿಜ್ಞಾನಿಗಳಾದ ಡಾ. ಸುನೀಲ್ ಕುಮಾರ್ ಎಸ್. ನೂಲಿ ವಿಷಯ ಮಂಡನೆ ಮಾಡಲಿದ್ದಾರೆ. ನೈಸರ್ಗಿಕ ಕೃಷಿಯ ತತ್ತ್ವಗಳು, ಪ್ರಮುಖ ತಂತ್ರಜ್ಞಾನಗಳು ಹಾಗೂ ಅವುಗಳನ್ನು ಕೃಷಿ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ವಿಧಾನಗಳ ಕುರಿತು ತರಬೇತಿಯಲ್ಲಿ ಸಮಗ್ರ ಮಾಹಿತಿಯನ್ನು ನೀಡಲಾಗುವುದು.
ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
Google Meet Link: https://mcet.google.com/xjy-jugo-mxyಈ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ ಲೈನ್ ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
