Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ

ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ

ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ
(ರಾಜ್ಯ ) ಜಿಲ್ಲೆ

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಥಾಪಿಸುವ ಮೂಲಕ ಯುವಜನರಲ್ಲಿ ಕ್ರೀಡೆ, ಫಿಟ್‌ನೆಸ್, ಆರೋಗ್ಯಕರ ಜೀವನಶೈಲಿ ಹಾಗೂ ನಾಯಕತ್ವದ ಅವಕಾಶಗಳನ್ನು ಉತ್ತೇಜಿಸುವ ಉದ್ದೇಶ ಹೊಂದಲಾಗಿದೆ.
ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ ೬,೦೦೦ ಜನಸಂಖ್ಯೆಗೆ ಒಂದು ಸಂಘ, ನಗರ ವಾರ್ಡ್ಗಳ ವ್ಯಾಪ್ತಿಯಲ್ಲಿ ಸರಾಸರಿ ೪,೦೦೦ ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ, ಪ್ರತಿ ಪಟ್ಟಣ ಪಂಚಾಯಿತಿ (ಟಿ.ಪಿ.) ವ್ಯಾಪ್ತಿಯಲ್ಲಿ ಸರಾಸರಿ ೪,೦೦೦ ಜನಸಂಖ್ಯೆಗೆ, ಪಟ್ಟಣ ಪುರಸಭೆ (ಟಿ.ಎಂ.ಸಿ.) ವ್ಯಾಪ್ತಿಯಲ್ಲಿ ೬,೦೦೦ ಜನಸಂಖ್ಯೆಗೆ, ನಗರಸಭೆ (ಸಿ.ಎಂ.ಸಿ.) ವ್ಯಾಪ್ತಿಯಲ್ಲಿ ೮,೦೦೦ ಜನಸಂಖ್ಯೆಗೆ ಹಾಗೂ ಮಹಾನಗರ ಪಾಲಿಕೆ ಮತ್ತು ಜಿ.ಬಿ.ಎ. ವ್ಯಾಪ್ತಿಯಲ್ಲಿ ಸರಾಸರಿ ೧೦,೦೦೦ ಜನಸಂಖ್ಯೆಗೆ ಒಂದು ಭಾರತ್ ಜೋಡೋ ಯುವ ಸಂಘ ಸ್ಥಾಪಿಸಲು ಅವಕಾಶವಿದೆ.
ಜಿಲ್ಲೆಯಾದ್ಯಂತ ಒಟ್ಟು ೧೦,೦೦೦ ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಈ ಸಂಘಗಳ ಮೂಲಕ ೫೦ ಲಕ್ಷಕ್ಕೂ ಅಧಿಕ ಯುವಜನರನ್ನು ಸಂಘಟಿಸುವ ಉದ್ದೇಶ ಹೊಂದಲಾಗಿದೆ. ಯುವಜನರಲ್ಲಿ ಕ್ರೀಡಾಸಕ್ತಿ ಬೆಳೆಸುವುದು, ದೈಹಿಕ ಕ್ಷಮತೆ ಹಾಗೂ ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುವುದು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ಸೂಕ್ತ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ.
ಪ್ರತಿ ಭಾರತ ಜೋಡೋ ಯುವ ಸಂಘಕ್ಕೆ ರೂ.೧೦ ಲಕ್ಷಗಳ ಅನುದಾನ ಒದಗಿಸಲಾಗುವುದು. ೧೬ರಿಂದ ೩೫ ವರ್ಷದೊಳಗಿನ ಆಸಕ್ತ ಯುವಕ-ಯುವತಿಯರು ಸಂಘದ ಸದಸ್ಯತ್ವ ಪಡೆಯಬಹುದಾಗಿದೆ. ಸದಸ್ಯತ್ವ ಪಡೆಯಲು ಆಸಕ್ತರು bರಿಥಿs.ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್ ಮೂಲಕ ಆಧಾರ್ ಕಾರ್ಡ್ನೊಂದಿಗೆ ಮೊಬೈಲ್ ಆ್ಯಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿಗಳು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು/ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ

ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ

ಹುಲುಸಾದ ಬೆಳೆ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಿ

ಎಎಸ್‌ಡಿಡಿಒ ಅಂಕಿ-ಸಂಖ್ಯೆ ಬಿಡುಗಡೆಗೊಳಿಸಿದ ಡಿಸಿ ಡಾ.ಆನಂದ ಕೆ.

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ
    In (ರಾಜ್ಯ ) ಜಿಲ್ಲೆ
  • ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಹುಲುಸಾದ ಬೆಳೆ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಎಎಸ್‌ಡಿಡಿಒ ಅಂಕಿ-ಸಂಖ್ಯೆ ಬಿಡುಗಡೆಗೊಳಿಸಿದ ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಆ.೧೬ರಂದು ವಿದ್ಯುತ್ ಪೊರೆಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆ.೧೭ ರಂದು ಹೆಸ್ಕಾಂ ಕುಂದು-ಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಅನಿರೀಕ್ಷಿತ ದಾಳಿ: ಬಾಲಕಾರ್ಮಿಕನ ರಕ್ಷಣೆ
    In (ರಾಜ್ಯ ) ಜಿಲ್ಲೆ
  • ಉಪ ನೋಂದಣಾಧಿಕಾರಿಗಳ ಕಚೇರಿಗೆ ಡಿಸಿ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಉಪ ನೋಂದಣಾಧಿಕಾರಿಗಳ ಕಚೇರಿಗೆ ಡಿಸಿ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.