ಉದಯರಶ್ಮಿ ದಿನಪತ್ರಿಕೆ
ಬಾಗಲಕೋಟೆˌ (ಜಮಖಂಡಿ): ಶ್ರೀ ಪಡಸಲಗೇಶ್ವರ ಸಹಕಾರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಮತ್ತು ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಹನಮಂತ ಕಾರಜೋಳ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಹನಮಂತ ಕಾರಜೋಳ, “ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಯುವ ಪೀಳಿಗೆ ದೇಶಭಕ್ತಿ, ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು” ಎಂದು ಹೇಳಿದರು.
ಉಪಾಧ್ಯಕ್ಷ ಸದಾಶಿವ ಬಡಿಗೇರ ಮಾತನಾಡಿ, “ಸ್ವಾತಂತ್ರ್ಯೋತ್ಸವವು ಕೇವಲ ಆಚರಣೆಗೆ ಸೀಮಿತವಾಗದೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪ ಮಾಡುವ ದಿನವಾಗಿದೆ” ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಡಾ. ಎಚ್.ಎನ್. ಹಳ್ಳಿ, ಡಾ. ಎ.ಜೆ. ಜನವಾಡ, ಸಿದ್ದಪ್ಪ ನ್ಯಾಮಗೌಡ, ಅಪ್ಪಾಸಾಬ ನ್ಯಾಮಗೌಡ, ಮಲ್ಲು ಕೋರಿ, ಪರಪ್ಪ ಲಿಗಾಡಿ ಹಾಗೂ ಭೀರಪ್ಪ ಮಿರ್ಜಿ ಉಪಸ್ಥಿತರಿದ್ದರು.
ಗ್ರಾಮಸ್ಥರಾದ ಈಶ್ವರ ನ್ಯಾಮಗೌಡ, ದೌಲತ್ ಕಡಕೋಳ, ಹನಮಂತ ನ್ಯಾಮಗೌಡ, ಶ್ರೀಶೈಲ ಮಠಪತಿ, ನಂದೇಪ್ಪ ಕಾರಜೋಳ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಾಹಕ ಸಿದ್ರಾಮ ಇಟ್ಟಿ ಅವರು ಎಲ್ಲರನ್ನು ಸ್ವಾಗತಿಸಿ, ವಂದಿಸಿದರು.

