ವಿಜಯಪುರ: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣವಾಗಿ ೫೦ ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಈ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸಲಾಗಿದ್ದು, ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತದ ವತಿಯಿಂದ ಅನುಷ್ಠಾನಗೊಳಿಸಲು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸೂಚನೆ ನೀಡಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸಹಯೋಗ ಪಡೆದು ನವೆಂಬರ್ ೧ ರಂದು ಜಿಲ್ಲೆಯಾದ್ಯಂತ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-೫೦ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುವುದು, ನವೆಂಬರ್ ೦೧ರ ಬೆಳಿಗ್ಗೆ ೯ ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ಗೌರವ ಸಲ್ಲಿಸಲು ಮನವಿ ಮಾಡುವುದು, ಅಂದು ಸಂಜೆ ೫ ಗಂಟೆಗೆ ಜಿಲ್ಲೆಯ ಎಲ್ಲಾ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸುವುದು, ನವೆಂಬರ್ ೧ರ ಸಂಜೆ ೭ ಗಂಟೆಗೆ ಜಿಲ್ಲೆಯ ಎಲ್ಲ ಗ್ರಾಮಗಳ ಮನೆಗಳ ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚಿ ಕನ್ನಡ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

