ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿ ನಿಲಯದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ | ಅಧ್ಯಕ್ಷ ಮಲ್ಲಿಕಾರ್ಜುನ ದೇವನಗಾಂವ ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕೀರ್ತಿ ನಗರದಲ್ಲಿರುವ ಶ್ರೀ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿ ನಿಲಯದಲ್ಲಿ ೮೦ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ದೇವನಗಾಂವ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ದೇಶದ ಐಕ್ಯತೆ ಮತ್ತು ಸಾರ್ವಭೌಮತೆ ಕಾಪಾಡಲು ವಿದ್ಯಾರ್ಥಿಗಳು ಈ ದಿನ ಪಣ ತೊಡಬೇಕು ಎಂದು ಕರೆ ನೀಡಿದರು.
ವಸತಿ ನಿಲಯದ ಅಧೀಕ್ಷಕಿ ವಿಜಯಲಕ್ಷ್ಮಿ ಎಂ ದೇವನಗಾಂವ ಅವರು ಮಹಾತ್ಮ ಗಾಂಧೀಜಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಗಳಿಗೆ ಪೂಜೆ ನೆರವೇರಿಸಿದರು.
ಸಮಾರಂಭದಲ್ಲಿ ವಸತಿ ನಿಲಯದ ಬಾಲಕಿಯರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

