Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
(ರಾಜ್ಯ ) ಜಿಲ್ಲೆ

ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರಾವಣ ಮಾಸ ಮುಗಿಯುವವರೆಗೆ ಪ್ರತಿದಿನ ಬೆಳಿಗ್ಗೆ ಪ್ರವಚನ | ಭಕ್ತರಿಗೆ ನಿತ್ಯ ಪ್ರಸಾದ ವ್ಯವಸ್ಥೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಕರ್ನಾಟಕ–ಮಹಾರಾಷ್ಟ್ರ ಗಡಿ ಭಾಗದ ಬಾಲಗಾವ್, ಕಾತ್ರಾಳ, ಅಕ್ಕಲವಾಡಿ ಹಾಗೂ ಬೋರಗಿ ಗ್ರಾಮಗಳ ಮಧ್ಯಭಾಗದಲ್ಲಿರುವ ಗುರುದೇವ ಆಶ್ರಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪರಮಪೂಜ್ಯ ಡಾ. ಅಮೃತಾನಂದ ಸ್ವಾಮೀಜಿಯವರಿಂದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗುರುದೇವ ಆಶ್ರಮ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಪರಮಪೂಜ್ಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ನಿರ್ಮಾಣಗೊಂಡಿರುವ ಗುರುದೇವ ಆಶ್ರಮವು ಈ ಭಾಗದ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿ ಗುರುತಿಸಿಕೊಂಡಿದೆ. ಸಿದ್ದೇಶ್ವರ ಮಹಾಸ್ವಾಮಿಗಳು ಆಶ್ರಮದಲ್ಲಿ ಹಲವು ದಿನಗಳ ಕಾಲ ವಾಸ್ತವ್ಯವಿದ್ದು, ಭಕ್ತರಿಗೆ ಆಧ್ಯಾತ್ಮಿಕ ಜ್ಞಾನ, ಧ್ಯಾನ, ಸಂಸ್ಕಾರ ಹಾಗೂ ಜೀವನ ಮೌಲ್ಯಗಳ ಕುರಿತು ತಮ್ಮ ಪ್ರವಚನಗಳ ಮೂಲಕ ಅಮೂಲ್ಯ ಸಂದೇಶಗಳನ್ನು ನೀಡಿದ್ದರು.
ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ಅಂಗವಾಗಿ ಆಗಸ್ಟ್ 17ರಿಂದ ಶ್ರಾವಣ ಮಾಸ ಮುಗಿಯುವವರೆಗೆ ಪ್ರತಿದಿನ ಬೆಳಿಗ್ಗೆ 6.30ರಿಂದ 7.30ರವರೆಗೆ ಗುರುದೇವ ಆಶ್ರಮದಲ್ಲಿ ಡಾ. ಅಮೃತಾನಂದ ಸ್ವಾಮೀಜಿಯವರ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ.
ಬಾಲಗಾವ್, ಕಾತ್ರಾಳ, ಅಕ್ಕಲವಾಡಿ, ಬೋರಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಿರಿಯರು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮೀಜಿಯವರ ಜ್ಞಾನಾಮೃತವಾಣಿಯನ್ನು ಆಲಿಸಿ, ಪ್ರವಚನದ ಸದುಪಯೋಗ ಪಡೆದುಕೊಳ್ಳಬೇಕೆಂದು ಗುರುದೇವ ಆಶ್ರಮ ಸೇವಾ ಸಮಿತಿ ಮನವಿ ಮಾಡಿದೆ.
ಪ್ರತಿದಿನ ಪ್ರವಚನದ ನಂತರ ಆಗಮಿಸುವ ಎಲ್ಲ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಆಸನ, ಕುಡಿಯುವ ನೀರು, ವಾಹನ ನಿಲುಗಡೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಆಶ್ರಮ ಸೇವಾ ಸಮಿತಿ ಹಾಗೂ ಸೇವಾಭಾವಿ ಸದ್ಭಕ್ತರ ಸಹಕಾರದಿಂದ ಅಚ್ಚುಕಟ್ಟಾಗಿ ಕಲ್ಪಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.