ಉದಯರಶ್ಮಿ ದಿನಪತ್ರಿಕೆ
ಚಡಚಣ: ನಾವು ಬ್ರಿಟೀಷರ ಆಳ್ವಿಕೆಯಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದಾಗ ನಮ್ಮ ಹಿರಿಯರು ಅನೇಕರು ಅವರ ವಿರುದ್ಧ ಹೋರಾಡಿದ ಫಲವಾಗಿ ನಮಗೆ ಸ್ವಾಂತತ್ರ್ಯ ಸಿಕ್ಕಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರು ಹೇಳಿದರು.
ಸ್ಥಳೀಯ ಶ್ರೀ ಸಂಗಮೇಶ್ವರ ಕಾಲೇಜು ಆವರಣದಲ್ಲಿ ತಾಲೂಕಾಡಳಿತ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ನಾವು ಇಂದು ಸ್ಮರಿಸುತ್ತ ನಮ್ಮ ದೇಶದ ಒಳತಿಗಾಗಿ ನಾವು ಜಾತಿ, ಪಂಗಡ, ಮೇಲು, ಕೀಳು ಎಲ್ಲವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಶಾಸಕರು ಹೇಳಿದರು.
ಧ್ವಜಾರೋಹಣ ನೆರವೇರಿ ತಹಶೀಲದಾರ ಸಂಜಯ ಇಂಗಳೆ ಮಾತನಾಡಿದರು.
ಸಾಲೋಟಗಿಯ ಸಾಹಿತಿ ಗೀತಯೋಗಿ ಅವರು ಅತಿಥಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಅಲ್ಲಮಪ್ರಭು ಕರ್ಜಗಿ, ಸಾಹಿತಿ ವಿದ್ಯಾ ಕಲ್ಯಾಣಶೆಟ್ಟಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.
ಧ್ವಜಾರೋಹಣದ ನಂತರ ಪೊಲೀಸ್ ಇಲಾಖೆ, ಗೃಹರಕ್ಷಕ ಇಲಾಖೆ ಹಾಗೂ ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಣಾಧಿಕಾರಿ ಅಶೋಕಕುಮಾರ ರಾಠೋಡ, ಬಿ.ಇ.ಓ. ನಾಗೇಂದ್ರಪ್ಪ ಎಚ್., ಸಿ.ಪಿ.ಐ. ಪರಶುರಾಮ ಮನಗೂಳಿ, ಪ.ಪಂ. ಮುಖ್ಯಾಧಿಕಾರಿ ಬಿ.ಕೆ. ತಾವಸೆ, ತೋಟಗಾರಿಕಾ ಇಲಾಖೆಯ ಅಧಿಕಾರಿ ಬಲರಾಮ ರಾಠೋಡ, ಸಿ.ಡಿ.ಪಿ.ಓ. ಸಾಹೇಬಗೌಡ ಜುಂಜರವಾಡ, ಪ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ, ಪ.ಪಂ. ಸರ್ವ ಸದಸ್ಯರು, ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಇದ್ದರು.

