ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಪ್ರಾಚಾರ್ಯ ಸಿಧ್ಧರಾಮ ಹೂಗಾರ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಅನೇಕ ಹೋರಾಟಗಾರರ ತ್ಯಾಗ ಬಲಿದಾನದ ನಂತರ ನಮಗೆ ಸ್ವಾತಂತ್ರ್ಯ ದೊರಕಿತು. ಅಂತಹ ಪವಿತ್ರವಾದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕಾಗಿರುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದರು.
ಇದೇ ವೇಳೆ ಸಂಸ್ಥೆಯ ಅಧ್ಯಕ್ಷ ಶ್ರೀಶೈಲಪ್ಪ ಜೋಗೂರ, ಅಲೋಕ ಬಡದಾಳ ಮಾತನಾಡಿದರು.
ಈ ವೇಳೆ ಶಾಲೆಯ ವತಿಯಿಂದ ಬಿ.ಎಲ್.ಡಿ.ಇ.ಆಸ್ಪತ್ರೆಗೆ ದೇಹದಾನ ಮಾಡಿರುವ ಆಶಾ ಕಾರ್ಯಕರ್ತೆ, ಮಹಿಳಾ ಮುಖಂಡರು ಗಂಗೂಬಾಯಿ ಅಮಲಝೇರಿ ರವರಿಗೆ ಸನ್ಮಾನಿಸಲಾಯಿತು.
ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ ಬಡದಾಳ, ಸದಸ್ಯರಾದ ಅಶೋಕ ವಾರದ,ಅಲೋಕ ಬಡದಾಳ, ಅಕ್ಷಯ ಕುಲಕರ್ಣಿ, ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ, ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ,ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗರ, ಸುನೀತಾ ಗುಂಡದ, ಅಂಜಲಿ ಕನ್ನೊಳ್ಳಿ, ಐಶ್ವರ್ಯ ಬೇಪಾರಿ ಮುಂತಾದವರು ಇದ್ದರು

