ನಿರ್ಮಲಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
ಉದಯರಶ್ಮಿ ದಿನಪತ್ರಿಕೆ
ಆಲಮೇಲ: ರಾಷ್ಟ್ರ ನಾಯಕರ ತನುಮನಧನಗಳ ತ್ಯಾಗ ಬಲಿದಾನದ ಪ್ರತೀಕವಾಗಿ ಸಿಕ್ಕಿರುವ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ದೇಶವನ್ನು ಅಭಿವೃದ್ಧಿ ಪಥದ ಕಡೆಗೆ ಕೊಂಡೊಯ್ಯುವುದು ಯುವಶಕ್ತಿಯ ಆಧ್ಯ ಕರ್ತವ್ಯವಾಗಿದೆ ಎಂದು ಡಾ ಸಮೀರ್ ಹಾದಿಮನಿ ಹೇಳಿದರು.
ಪಟ್ಟಣದ ನಿರ್ಮಲಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಸಹಿಷ್ಣುತೆ, ಸಾಮರಸ್ಯ ಅನಾದಿಕಾಲದಿಂದಲೂ ನೆಲೆಗೊಂಡಿದ್ದು, ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ದೇಶ ಪ್ರೇಮವನ್ನು ಮೂಡಿಸಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಸಿಸ್ಟರ್ ಐರಿನ್ ವಹಿಸಿದ್ದರು. ನಿರ್ಮಲಾಲಯ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕರಾದ ಸಿಸ್ಟರ್ ಒಲಿವಾ, ಸಂಸ್ಥೆಯ ವ್ಯವಸ್ಥಾಪಕರಾದ ಸಿಸ್ಟರ್ ರೀವಿಂಗ್ ಹಾಗೂ ಸಿಸ್ಟರ್ ಸಂಜುಕ್ತಾ ಅವರು ಉಪಸ್ಥಿತರಿದ್ದರು.
ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.

