Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಲ್ಲಿ ೧೯ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ
(ರಾಜ್ಯ ) ಜಿಲ್ಲೆ

ವಿಜಯಪುರದಲ್ಲಿ ೧೯ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಳೆಗಾಲದಲ್ಲಿ ವಿಜಯಪುರ ನಗರದ ಪ್ರವಾಹ ಪರಿಸ್ಥಿತಿ ನಿವಾರಣೆಗೆ ಕ್ರಮ | ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಳೆಗಾಲದಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ–೨ರಡಿ ೧೯ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ, ಮಳೆಗಾಲದಲ್ಲಿ ಸಾರ್ವಜನಿಕರಿಗೆ ಹಾಗೂ ಮನೆಗಳಿಗೆ ಉಂಟಾಗುವ ತೊಂದರೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಹೇಳಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ–೨ರಡಿ ಕೈಗೆತ್ತಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ ಅವರು ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಯೋಜನೆಯಡಿ ಮಳೆನೀರು ಚರಂಡಿ, ಒಳಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ವಿಶೇಷವಾಗಿ ನವಭಾಗ್ ಪ್ರದೇಶದಲ್ಲಿ ಮಳೆನೀರು ಚರಂಡಿ ಹಾಗೂ ನವಭಾಗ್–ಹಮೀದ ನಗರ ರಸ್ತೆಯಲ್ಲಿ ಮಳೆನೀರು ಚರಂಡಿ ಮತ್ತು ಯುಟಿಲಿಟಿ ಡಕ್ಟ್ ಅಭಿವೃದ್ಧಿ ಕಾಮಗಾರಿಯನ್ನು ೧.೫೦ ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ವಾರ್ಡ್ ನಂ.೨೦, ೨೮ ಹಾಗೂ ೩೦ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಒಟ್ಟು ಅಂದಾಜು ಮೊತ್ತ ೧೯ ಕೋಟಿಯಾಗಿದ್ದು, ನಗರದಲ್ಲಿ ಮಳೆನೀರು ನಿರ್ವಹಣೆ, ಒಳಚರಂಡಿ ಹಾಗೂ ರಸ್ತೆ ಮೂಲಸೌಕರ್ಯ ಸುಧಾರಿಸಲು ಈ ಕಾಮಗಾರಿಗಳು ಪೂರಕವಾಗಲಿವೆ ಎಂದರು.
ವಾರ್ಡ್ ನಂ. ೨೮ರ ಅಬ್ದುಲ್ ಹಮೀದ್ ದರ್ಗಾ ಕ್ರಾಸ್ ನಿಂದ ಕೆಕೆಜಿಎಸ್ ವೃತ್ತ ಹಾಗೂ ಸಂದಲ್ ಬಾವಡಿ ಪ್ರದೇಶಗಳಲ್ಲಿ ಒಳಚರಂಡಿ, ರಸ್ತೆ ಮತ್ತು ಮಳೆನೀರು ಚರಂಡಿಯನ್ನು ೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು.
ಖಾಜಾ ನಗರ ಮತ್ತು ನವಭಾಗ ಪ್ರದೇಶಗಳಲ್ಲಿ ಒಳಚರಂಡಿ, ಚರಂಡಿ ಹಾಗೂ ರಸ್ತೆ ಅಭಿವೃದ್ಧಿಗೆ ೨ ಕೋಟಿ ರೂ, ಟಿಪ್ಪು ಸುಲ್ತಾನ್ ನಗರ ಕೋಟೆ ಗೋಡೆಯಿಂದ ಅಲಿಕ್ ರೋಜಾ ಮಾರ್ಗವಾಗಿ ಸರಕಾರಿ ತೋಟದವರೆಗೆ ೨.೫೦ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಕಾಸ್‌ಗೇರಿ ಓಣಿ ಗಜಾನನ ಕಿರಾಣಿ ಅಂಗಡಿಯಿಂದ ಶಿರೂರಕರ ಹಾಗೂ ಜೇರಲಿ ಮನೆವರೆಗೆ ೨ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ವಾರ್ಡ್ ನಂ. ೩೦ರ ಹಳ್ಳಿ ಕಾಲೋನಿ, ಹವೇಲಿ ಗಲ್ಲಿ ಹಾಗೂ ಟಿಪ್ಪು ನಗರ ಮತ್ತು ಲಾಲ್ ಬಂಗ್ಲಾ ಪ್ರದೇಶಗಳಲ್ಲಿ ೩ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಒಳಚರಂಡಿ ಅಭಿವೃದ್ಧಿಪಡಿಸಲಾಗುವುದು ಎಂದರು.
ನಗರದ ಮುಬಾರಕ್ ವೃತ್ತದಿಂದ ಆರ್ಕಾಟ್ ದರ್ಗಾ ರಸ್ತೆ ಅಂಕಲ್ ಕಾರ್ನರ್ ವರೆಗೆ ಮಳೆನೀರು ಚರಂಡಿ, ಯುಟಿಲಿಟಿ ಡಕ್ ಹಾಗೂ ರಸ್ತೆಯನ್ನು ೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ವಾರ್ಡ್ ನಂ. ೨೦ರ ಟಿಪ್ಪು ಸುಲ್ತಾನ್ ಕಾಲೋನಿ, ಮಕ್ಬೂಲ್ ನಗರ, ಇಂದಿರಾ ನಗರ, ಲತೀಫ್ ನಗರ, ಕೆಎಚ್‌ಬಿ ಕಾಲೋನಿ ಹಾಗೂ ಆದಿಲ ಶಾಹಿ ಪ್ರದೇಶಗಳಲ್ಲಿ ರಸ್ತೆ ಹಾಗೂ ಒಳಚರಂಡಿ ಪೈಪ್ ಲೈನ್ ಕಾಮಗಾರಿಗೆ ೨ ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ, ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ್ ಮೆಕ್ಕಳಕಿ, ಅಧೀಕ್ಷಕ ಅಭಿಯಂತರರಾದ ಇ. ತಿಮ್ಮಪ್ಪ, ಜಮೀರ್ ಬಾಂಗಿ, ಮುಬೀನ್ ಶೇಖ್, ಕೈಸರ್ ಇನಾಮದಾರ್ ಹಾಗೂ ಅಪ್ಪು ಪೂಜಾರಿ ಸೇರಿದಂತೆ ಸಂಬಂಧಿಸಿದ ವಾರ್ಡ್ಗಳ ಪಾಲಿಕೆ ಸದಸ್ಯರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.