Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಕಲಾವಿದರ ಪಾತ್ರ ಅಪಾರ
(ರಾಜ್ಯ ) ಜಿಲ್ಲೆ

ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಕಲಾವಿದರ ಪಾತ್ರ ಅಪಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇಶಪ್ರೇಮ & ಜನಜಾಗೃತಿ ಮೂಡಿಸಿದ ರಂಗಕರ್ಮಿಗಳು | ಹಿರಿಯ ಕಲಾವಿದ ಸಿದ್ರಾಮ್ ತತ್ರಾಣಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆˌ (ಜಮಖಂಡಿ): ಭಾರತದ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಕರ್ನಾಟಕದ ರಂಗಭೂಮಿ ಹಾಗೂ ನಾಟಕ ಕಲಾವಿದರು ಜನರಲ್ಲಿ ದೇಶಪ್ರೇಮ, ರಾಷ್ಟ್ರಾಭಿಮಾನ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದರು ಎಂದು ಹಿರಿಯ ಕಲಾವಿದ ಸಿದ್ರಾಮ್ ತತ್ರಾಣಿ ಹೇಳಿದರು.
ನಗರದ ಬಸವೇಶ್ವರ ಸರ್ಕಲ್‌ ಸಮೀಪದ ವೀರುವ ವಿಶ್ವಜ್ಯೋತಿ ಪಂಚಾಕ್ಷರ ನಾಟ್ಯ ಸಂಘದ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಚಳುವಳಿಯಲ್ಲಿ ನೇರವಾಗಿ ಧುಮುಕಿದವರಲ್ಲಿ ವೃತ್ತಿ ರಂಗಭೂಮಿಯ ಅನೇಕ ಕಲಾವಿದರು ಇದ್ದರು. ಅಂದಿನ ಸಂದರ್ಭದಲ್ಲಿ ನಾಟಕಗಳು ಕೇವಲ ಮನರಂಜನೆಯ ಮಾಧ್ಯಮವಾಗಿರದೆ, ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಿಸುವ ಹಾಗೂ ಬ್ರಿಟಿಷರ ವಿರುದ್ಧ ಹೋರಾಟದ ಕಿಚ್ಚು ಹಚ್ಚುವ ಶಕ್ತಿಶಾಲಿ ಮಾಧ್ಯಮವಾಗಿದ್ದವು ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಾಟಕದ ಸಂಗೀತ ನಿರ್ದೇಶಕ ಬಸವಲಿಂಗಪ್ಪ ಕೊಡ್ಲಿ ಮಾತನಾಡಿ, ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟಕ್ಕೆ ಸೀಮಿತವಾಗಿರಲಿಲ್ಲ. ರಂಗಭೂಮಿ, ನಾಟಕ, ಸಂಗೀತ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಕಲಾ ಮಾಧ್ಯಮಗಳ ಮೂಲಕವೂ ಬ್ರಿಟಿಷರ ವಿರುದ್ಧ ಜನಜಾಗೃತಿ ಮೂಡಿಸಲಾಗಿತ್ತು. ಕಲಾವಿದರು ತಮ್ಮ ಕಲೆ ಮತ್ತು ಪ್ರತಿಭೆಯನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಸಮರ್ಪಿಸಿಕೊಂಡಿದ್ದರು ಎಂದು ತಿಳಿಸಿದರು.
ಇಂದಿನ ಪೀಳಿಗೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಕಲಾವಿದರು ವಹಿಸಿದ ಪಾತ್ರವನ್ನು ಅರಿತುಕೊಂಡು ದೇಶದ ಏಕತೆ, ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರೀಯ ಭಾವನೆಗಳನ್ನು ಬೆಳೆಸಿಕೊಳ್ಳಬೇಕು. ರಂಗಭೂಮಿಯಂತಹ ಜನಪರ ಕಲಾ ಮಾಧ್ಯಮಗಳ ಮೂಲಕ ಸಮಾಜದಲ್ಲಿ ಉತ್ತಮ ಸಂದೇಶಗಳನ್ನು ಸಾರುವ ಕಾರ್ಯ ಮುಂದುವರಿಯಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜೇವರ್ಗಿ ನಾಟಕ ಕಂಪನಿಯ ಕಲಾವಿದರಾದ ರಾಘವೇಂದ್ರ ಮುದೋಳ, ಸಂಘದ ಒಡತಿ ಸುಜಾತಾ ಗುಬ್ಬಿ, ಪ್ರಭು ಹಿರೇಮಠ್, ಸಿದ್ದು ಹಿರೇಮಠ್, ಪ್ರಿಯಾ ಅಕ್ಕಲಕೋಟ, ಧನ್‌ರಾಜ್ ಬುಗಡೆಕರ, ಸಿದ್ದಣ್ಣ ಬಾಪ್ರಿ, ಕಮತಗಿ ಅವಿನಾಶ್ ಅಕ್ಕಲಕೋಟ, ಪುಟ್ಟು ಕೊಡ್ಲಿ, ಪೃಥ್ವಿ ಬಾದಾಮಿ, ಪ್ರೇಮ ಮೂಡಲಗಿ, ರವಿ ಬಿಸರಹಳ್ಳಿ ಸೇರಿದಂತೆ ವಿವಿಧ ಕಲಾವಿದರು ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಂಗಭೂಮಿ ಕಲಾವಿದರು ಒಂದೆಡೆ ಸೇರಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವ ಮೂಲಕ ಕಲೆಯ ಜೊತೆಗೆ ದೇಶಪ್ರೇಮದ ಸಂದೇಶವನ್ನು ಸಾರಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.