ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಎ.ಬಿ.ವಿ. (ಸಿ.ಬಿ.ಎಸ್.ಇ.) ಶಾಲೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಸಾಂಪ್ರದಾಯಿಕ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು.
ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಆಚರಣೆಗಳ ಮಹತ್ವವನ್ನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಪರಿಚಯಿಸುವ ಉದ್ದೇಶದಿಂದ ಶಾಲೆಯಲ್ಲಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಆಚರಣೆ ನೆರವೇರಿಸಲಾಯಿತು.
ಶಾಲೆಯ ಪ್ರಾಂಶುಪಾಲೆ ಐಶ್ವರ್ಯ ಸಂಗಮ, ಉಪಪ್ರಾಂಶುಪಾಲ ರವಿಕಾಂತ ಮೆಂಡೇಗಾರ ನಾಗರ ಪಂಚಮಿ ಹಬ್ಬದ ಮಹತ್ವವನ್ನು ತಿಳಿಸಿದರು.

