Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಕ್ತದಾನ ಮತ್ತೊಂದು ಜೀವಕ್ಕೆ ಜೀವದಾನ :ಚವಲರ
(ರಾಜ್ಯ ) ಜಿಲ್ಲೆ

ರಕ್ತದಾನ ಮತ್ತೊಂದು ಜೀವಕ್ಕೆ ಜೀವದಾನ :ಚವಲರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ರಕ್ತದಾನ ಮಾಡುವುದರಿಂದ ಮತ್ತೊಂದು ಜೀವಕ್ಕೆ ಜೀವದಾನ ಮಾಡಿದಂತಾಗುತ್ತದೆ. ಜೀವ ಉಳಿಸುವಲ್ಲಿ ರಕ್ತ ಅತ್ಯಮೂಲ್ಯವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಸುರೇಶ ಚವಲರ ಹೇಳಿದರು.
ತಿಕೋಟಾ ಪಟ್ಟಣದ ವಾಡೆ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯುವಕರಿಂದ ದೇಶ ಸದೃಢವಾಗುತ್ತದೆ. ಯುವಶಕ್ತಿ ಸಮಾಜದ ಅಭಿವೃದ್ಧಿಗೆ ಪ್ರಮುಖವಾದುದು. ರಕ್ತದಾನ ಮಾಡುವ ಮೂಲಕ ಯುವಕರು ಮಾನವೀಯ ಸೇವೆಯ ಜೊತೆಗೆ ಮತ್ತೊಂದು ಕುಟುಂಬದ ಬದುಕಿಗೆ ಆಸರೆಯಾಗಬಹುದು ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಘು ನಡುವಿನಮನಿ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರದಲ್ಲಿ ಭಾಗವಹಿಸಿ, ಯುವಕರಿಗೆ ಮಾದರಿಯಾದರು. ಅವರ ಸೇವೆಯನ್ನು ಗಣ್ಯರು ಶ್ಲಾಘಿಸಿದರು.
ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಗುರುಪಾದ ದಾಸ್ಯಾಳ ಮಾತನಾಡಿ ಪಟ್ಟಣದಲ್ಲಿ ರೈತ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಸಂತಸದ ಸಂಗತಿ. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಮೇಲಿಂದ ಮೇಲೆ ನಡೆಯಬೇಕು. ರಕ್ತವು ಒಂದು ಜೀವವನ್ನು ಉಳಿಸುವ ಶಕ್ತಿ ಹೊಂದಿದೆ. ಆದ್ದರಿಂದ ರಕ್ತದಾನ ಶ್ರೇಷ್ಠ ದಾನವಾಗಿದ್ದು, ಯುವಕರು ವರ್ಷದಲ್ಲಿ ಕನಿಷ್ಠ ಒಂದೆರಡು ಬಾರಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.
ಶಿಬಿರದಲ್ಲಿ ಆಲ್ ಅಮೀನ್ ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿ ಡಾ. ಇಬ್ರಾಹಿಂ ನಾಗನೂರ ಅವರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ವೈದ್ಯರು ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ಅದೇ ರೀತಿ ರಕ್ತನಿಧಿ ಕೇಂದ್ರ ವಿಜಯಪುರದ ನಾಗರಾಜ ಪೂಜಾರಿ ಹಾಗೂ ವಿನಾಯಕ ಹಿರೇಮಠ ಅವರ ಸಹಯೋಗದಲ್ಲಿ ರಕ್ತ ಸಂಗ್ರಹಣಾ ಕಾರ್ಯ ನಡೆಯಿತು. ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಜೆ.ಎಂ. ಪಾಟೀಲ, ಪಿಎಸ್ಐ ದೇವರಾಜ ಉಳ್ಳಾಗಡ್ಡಿ, ನೀರಾವರಿ ಇಲಾಖೆಯ ಅಧಿಕಾರಿ ಅಂಬಣ್ಣ ಹರಳಯ್ಯ, ರೈತ ಸಂಘದ ಮಹಿಳಾ ತಾಲ್ಲೂಕ ಅಧ್ಯಕ್ಷೆ ಸಂಗೀತಾ ರಾಠೋಡ, ಸುರೇಶ ಕೊಣ್ಣೂರ, ರವಿಕಿರಣ ಹೊಸೂರ, ಮೋಬೀನ ಅಪರಾದ, ಗಣೇಶ ದಳವಾಯಿ, ಸಂತೋಷ ತಾಳಿಕೋಟಿ, ಜಾವೀದ್ ಮುಜಾವರ, ಆರ್.ಬಿ. ದೇಸಾಯಿ, ಬಸಯ್ಯ ವಿಭೂತಿ, ಲೇಪು ಕೊಣ್ಣೂರ, ಚಂದು ತೋರವಿ, ರಾವತ ಕಂಭಾರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.