ವಿಜಯಪುರ: ಕಬ್ಬು ನುರಿಸುವ ಹಂಗಾಮು ಆರಂಭಗೊಳ್ಳುವ ಹಿನ್ನಲೆಯಲ್ಲಿ ಜಿಲ್ಲೆಯ ಬಸವೇಶ್ವರ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಕ್ಕರೆ ಕಾರ್ಖಾನೆಗಳು ರೈತರಿಗೆ ಸಕಾಲದಲ್ಲಿ ಕಬ್ಬಿನ ಬಿಲ್ ಪಾವತಿಸಬೇಕು. ಕಾರ್ಖಾನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಿಳಿಸಿ, ನಿಯಮಾನುಸಾರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಉಪಸ್ಥಿತರಿದ್ದರು.
Related Posts
Add A Comment