Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
(ರಾಜ್ಯ ) ಜಿಲ್ಲೆ

ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅವರಿಂದ ಬರ ಪರಿಸ್ಥಿತಿ ಹಾಗೂ ಬೆಳೆ ವೀಕ್ಷಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತೀವ್ರ ಮಳೆ ಅಭಾವದಿಂದಾಗಿ ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು, ಭಾನುವಾರ ಜಿಲ್ಲೆಯಾದ್ಯಂತ ರೈತರ ಜಮೀನುಗಳಿಗೆ ಖುದ್ದು ಭೇಟಿ ನೀಡಿ ಹಾನಿಗೀಡಾದ ಬೆಳೆಗಳನ್ನು ಪರಿಶೀಲಿಸಿ, ಸಂಕಷ್ಟದಲ್ಲಿರುವ ರೈತರ ಪರ ನಮ್ಮ ಸರ್ಕಾರವಿದೆ ಎಂದು ಭರವಸೆ ನೀಡಿದರು.
ಇಂಡಿ ತಾಲೂಕಿನ ಹೊರ್ತಿ ಗ್ರಾಮದ ರೈತ ಮಾಳಪ್ಪ ಸೊನಕನಹಳ್ಳಿ ಅವರ ೬ ಎಕರೆ ಜಮೀನಿನಲ್ಲಿ ಒಣಗುತ್ತಿರುವ ತೊಗರಿ ಬೆಳೆಯನ್ನು ಸಚಿವರು ವೀಕ್ಷಿಸಿದರು.
ಈ ವೇಳೆ ರೈತರ ಸಮಸ್ಯೆಯನ್ನು ಸಹಾನುಭೂತಿಯಿಂದ ಆಲಿಸಿದ ಸಚಿವರು, ನಮ್ಮ ಸರ್ಕಾರವು ಸಂಕಷ್ಟದಲ್ಲಿರುವ ರೈತರ ಪರವಾಗಿ ನಿಲ್ಲುತ್ತದೆ. ರೈತರ ಕಷ್ಟ-ನಷ್ಟಗಳನ್ನು ತಿಳಿದುಕೊಳ್ಳಲು ಜಿಲ್ಲೆಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ವೈಜ್ಞಾನಿಕ ವರದಿ ಸಿದ್ಧಪಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ, ರೈತರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶೇ.ನೂರರಷ್ಟು ಹಾನಿ: ಇಂಡಿ ತಾಲೂಕಿನಲ್ಲಿ ಶೇ.೧೦೦ ರಷ್ಟು ಬೆಳೆಗಳು ಹಾನಿಗೀಡಾಗಿವೆ. ಕಳೆದ ವಾರ ಕೆಲ ಕಡೆ ಭೇಟಿ ನೀಡಿದ ವೇಳೆ ಅಲ್ಲಿಯ ಬೆಳೆಗಳು ಶೇ. ೮೦ರಷ್ಟು ಹಾಳಾಗಿದ್ದವು. ಈಗ ಶೇ. ೨೦ ರಷ್ಟು ಹಾನಿಯಾಗಲಿವೆ. ಹಾಗಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾನಿಗೀಡಾಗಿವೆ ಎಂದು ಸಚಿವರು ತಿಳಿಸಿದರು.
ರೈತರ ಸಮಸ್ಯೆಯನ್ನು ಖುದ್ದಾಗಿ ಅನುಭವಿಸಿದೆ. ಅವರೆಲ್ಲ ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಈ ಸತ್ಯ ಅರಿತಿರುವ ನಮ್ಮ ಸರ್ಕಾರ ರೈತರ ನೆರವಿಗೆ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಇಂಡಿ ತಾಲೂಕಿನಲ್ಲಿ ೪೨ ಸಾವಿರ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಬಾರಿ ಜಿಲ್ಲಾದ್ಯಂತ ೨.೫೦ ಲಕ್ಷ ರೈತರು ಬೆಳೆ ವಿಮೆ ಮಾಡಿಕೊಂಡಿದ್ದಾರೆ ಎಂದು ಸಚಿವರು ವಿವರಿಸಿದರು.
ಜಿಲ್ಲೆಯ ಹಲವು ತಾಲೂಕುಗಳಲ್ಲಿ ಕನಿಷ್ಠ ಪ್ರಮಾಣದ ಬಿತ್ತನೆಯಾಗಿದ್ದು, ಮುಂಗಾರು ಮಳೆಯ ಸಕಾಲದಲ್ಲಿ ಬಾರದೇ ಇರುವುದರಿಂದ ರೈತರು ತೀವ್ರ ಸಮಸ್ಯೆಯಲ್ಲಿದ್ದಾರೆ. ಕೃಷಿ ಜಮೀನುಗಳಿಗೆ ನೇರ ಭೇಟಿ ನೀಡಿ ಬೆಳೆ ಬೆಳವಣಿಗೆ ನೈಜ ಚಿತ್ರಣ ಪಡೆಯುವುದರ ಜೊತೆಗೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆಯ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಜಮೀನುಗಳಲ್ಲಿ ತೇವಾಂಶವಿಲ್ಲ. ಒಂದ ಫೀಟ್ ಬೆಳೆ ಇದೆ.ಹಸಿ ಮಳೆಯಾಗದೇ ಇರುವುದರಿಂದ ಸಮಸ್ಯೆಯಾಗಿದೆ. ತೇವಾಂಶವಿಲ್ಲದೇ ಬೆಳೆ ಒಣಗಿವೆ. ನೀರು ಜಾಸ್ತಿ ಹಿಂಗದೇ ಬೆಳೆ ಬೆಳವಣಿಗೆ ಆಗಿಲ್ಲ ಎಂದರು.
ರೈತರ ಸಂಕಷ್ಟ ಆಲಿಸಿದ ಸಚಿವರು, ಶಕ್ತಿ ಮೀರಿ ಸರ್ಕಾರ ರೈತರ ನೆರವಿಗೆ ನಿಲ್ಲಲಿದೆ. ಜಿಲ್ಲೆಯ ಎಲ್ಲ ಭಾಗದಲ್ಲೂ ಈ ಸಮಸ್ಯೆಯಿದೆ. ನಿಮ್ಮ ಜೊತೆ ನಾವಿದ್ದೇವೆ. ಮಳೆಯಾಧಾರಿತ ಬೆಳೆ ಬೆಳವಣಿಗೆ ಕುಂಠಿತವಾಗಿವೆ. ಈ ಸಮಸ್ಯೆಯನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು. ಸರಕಾರಕ್ಕೆ ನಿಮ್ಮ ಸಮಸ್ಯೆ ತಿಳಿದಿದೆ. ಸಿಎಂ ಅವರಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ನಾನು ಸೇರಿದಂತೆ ಈ ಭಾಗದ ಶಾಸಕರು ಸೇರಿ ಮನವಿ ಮಾಡಿ, ಸೂಕ್ತ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ರಾಮ ಬರಗಿಮಠ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರೈತರು ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.