Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯ ಶ್ರೀ ಸಮರ್ಥ ವಿದ್ಯಾವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಪ್ರಾಥಮಿಕ ಶಾಲೆ, ಪ್ರೇರಣಾ ಪ್ರಾಥಮಿಕ ಶಾಲೆ, ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸಹಯೋಗದಲ್ಲಿ ೮೦ನೆಯ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಆಚರಣೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಭಾರತ ಸ್ವಾತಂತ್ರ‍್ಯ ಹೊಂದಿದ್ದು, ಸ್ವಾತಂತ್ರ‍್ಯೋತ್ಸವವು ದೇಶದ ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಗತಿಯನ್ನು ಸ್ಮರಿಸುವ ಮಹತ್ವದ ದಿನವಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ ಹೇಳಿದರು.
ಸಿಂದಗಿ ಪಟ್ಟಣದ ಶ್ರೀ ಸಮರ್ಥ ವಿದ್ಯಾವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಪ್ರಾಥಮಿಕ ಶಾಲೆ, ಪ್ರೇರಣಾ ಪ್ರಾಥಮಿಕ ಶಾಲೆ, ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ೮೦ನೆಯ ಸ್ವಾತಂತ್ರ‍್ಯೋತ್ಸವ ದಿನಾಚರಣೆಯ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶಭಕ್ತಿ, ತ್ಯಾಗ ಮತ್ತು ಬ್ರಿಟಿಷರ ವಿರುದ್ಧದ ಹೋರಾಟ ಯುವಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ. ಮಕ್ಕಳು ದೇಶದ ಹಿರಿಮೆ ಅರಿತು, ರಾಷ್ಟ್ರದ ಏಕತೆ ಮತ್ತು ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು. ಶ್ರೀರಕ್ಷಾ ಬಿರಾದಾರ ಪಥ ಸಂಚಲನದ ನೇತೃತ್ವ ವಹಿಸಿದ್ದರು.
ಶಾಲಾ ಸಂಸತ್ತಿನ ಪ್ರಧಾನ ಕಾರ್ಯದರ್ಶಿ ಕುಮಾರ ಮಲ್ಲನಗೌಡ ಸೋಮಜಾಳ, ಕೃತಿ ದೇಶಮುಖ ಹಾಗೂ ವೈಭವ ಬಾಗಲಕೋಟ ಗೌರವ ವಂದನೆ ಸಲ್ಲಿಸಿದರು. ನಿರಜದತ್ತ ಕುಲಕರ್ಣಿ, ದೇವರಾಜ ಕರ್ನಾಳ, ಅರುಣ ಬಿರಾದಾರ ಹಾಗೂ ಅಮೀತ ಅಗಸಬಾಳ ನೇತೃತ್ವದ ವಾದ್ಯಗೋಷ್ಠಿ ತಂಡ ಉತ್ತಮ ಪ್ರದರ್ಶನ ನೀಡಿತು. ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಪಿರಾಮಿಡ್, ರೈತ ಮತ್ತು ಸೈನಿಕರ ನೃತ್ಯ ಸೇರಿದಂತೆ ಸಾಹಸ ಹಾಗೂ ದೇಶಭಕ್ತಿ ಪ್ರದರ್ಶನಗಳು ಗಮನ ಸೆಳೆದವು.
ಸಂಸ್ಥೆಯ ಅಧ್ಯಕ್ಷ ಆರ್.ಡಿ. ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಗುರುಮಾತೆ ಎಂ.ಪಿ.ಬುಕ್ಕಾ, ಎಸ್.ಆಯ್.ಅಸ್ಕಿ, ಪಾಲಕ ಪ್ರತಿನಿಧಿ ಲಕ್ಷ್ಮಿ ಗುಗ್ಗರಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು. ವಿ.ಎ.ನಾಯಕ ಸ್ವಾಗತಿಸಿದರು. ಶಿಲ್ಪಾ ಪಾಟೀಲ ವಂದಿಸಿದರು. ಸತೀಶ ಕುಲಕರ್ಣಿ ಹಾಗೂ ಜಿ.ಎಸ್.ಯಂಕಂಚಿ ನಿರೂಪಿಸಿದರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ಜರುಗಿದ ೮೦ನೇ ಸ್ವಾತಂತ್ರೋತ್ಸವ ದಿನಾಚರಣೆಯ ಅಂಗವಾಗಿ ಪ್ರಾಚಾರ್ಯ ವಿಮಲಕಾಂತ ಪಾಟೀಲ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಇಂದಿನ ಸಮಾಜದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ನಾವು ನಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶ ಸೇವೆಗೆ ಮುಂದಾಗಬೇಕಿದೆ ಎಂದು ಪ್ರಾಚಾರ್ಯ ವಿಮಲಕಾಂತ ಪಾಟೀಲ ಹೇಳಿದರು.
ಇದೇ ವೇಳೆ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ, ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಸಾಯಬಣ್ಣ ಸಜ್ಜನ, ರೇವಣಸಿದ್ದ ಹಾಲಕೇರಿ, ಎಮ್.ಕೆ.ಬಿರಾದಾರ, ಎಸ್.ಸಿ.ದುದ್ದಗಿ, ಹೇಮಾ ಕಾಸರ, ಹೇಮಾ ಹಿರೇಮಠ, ಜಿ.ವಿ ಪಾಟೀಲ್, ಪೂಜಾ ಆಲಮೇಲ, ಶ್ರೀದೇವಿ ದುದ್ದಗಿ, ಬಸಮ್ಮ ಧರಿ, ಯು.ಸಿ.ಪೂಜೇರಿ, ಎ.ಆರ್.ರಜಪೂತ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಇದ್ದರು.
ಮಹಿಳಾ ವಸತಿ ನಿಲಯ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಶ್ರೀಧರಸ್ವಾಮಿ ವಿದ್ಯಾವರ್ಧಕ ಸಂಘ ನಡೆಸುವ ಮಹಿಳಾ ವಸತಿ ನಿಲಯದಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಧ್ವಜಾರೋಹಣವನ್ನು ಸಿಡಿಪಿಒ ಅನೀಲ ಹಳ್ಳಿ ನೆರವೇರಿಸಿದರು.
ಈ ವೇಳೆ ವಸತಿ ನಿಲಯದ ಮೇಲ್ವಿಚಾರಕಿ ಜಯಶ್ರೀ ಬಿರಾದಾರ, ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಸಿಬ್ಬಂದಿ ರಶ್ಮಿ ನೂಲಾನವರ, ವಿದ್ಯಾವತಿ ದೇಸಾಯಿ ಸೇರಿದಂತೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಶ್ರೀ ಗುರುಕೃಪಾ ಶಾಲೆ
ಸಿಂದಗಿ ನಗರದ ಶ್ರೀ ಗುರುಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ರಾಷ್ಟ್ರಧ್ವಜಾರೋಹಣವನ್ನು ಡಾ.ಗಿರೀಶ್ ಕುಲಕರ್ಣಿ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಮಾತೆ ಹೇಮಾ ಪೊತದಾರ್ ಕಾರ್ಯದರ್ಶಿ ಹೆಚ್.ಜಿ.ಪೊತದಾರ್ ಸೇರಿದಂತೆ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು

ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ‍್ಯದ ಮೌಲ್ಯ ಉಳಿಸುವ ಹೊಣೆ ಪ್ರತಿ ನಾಗರಿಕನದ್ದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.