Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
(ರಾಜ್ಯ ) ಜಿಲ್ಲೆ

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮನೆ ಮನೆಗಳಲ್ಲಿ ನಾಗಪ್ಪನಿಗೆ ಹಾಲೆರೆಯುವ ಮೂಲಕ ವಿಶೇಷ ಪೂಜೆ | ಪರಸ್ಪರ ಸಿಹಿತಿನಿಸು ಹಂಚಿಕೊಂಡು ಹಬ್ಬದ ಸಂಭ್ರಮ

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆ, (ಜಮಖಂಡಿ): ನಾಗರ ಪಂಚಮಿ ಹಬ್ಬವನ್ನು ಮಹಿಳೆಯರು ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಿದರು. ಬೆಳಗ್ಗೆಯಿಂದಲೇ ಮನೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಮಹಿಳೆಯರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮನೆಯ ನಾಗಪ್ಪನಿಗೆ ಹಾಲೆರೆಯುವುದು, ಅರಿಶಿನ-ಕುಂಕುಮ, ಹೂವುಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುವುದು ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಬಳಿಕ ನಾಗದೇವರಿಗೆ ಎಳ್ಳುಂಡೆ, ವಿವಿಧ ಬಗೆಯ ಸಿಹಿತಿನಿಸುಗಳು ಹಾಗೂ ನೈವೇದ್ಯ ಅರ್ಪಿಸಿ ಕುಟುಂಬದ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಲಾಯಿತು.
ನಾಗರ ಪಂಚಮಿಯ ವಿಶೇಷತೆಯಾದ ಎಳ್ಳುಂಡೆ, ಕರ್ಜೂರ, ಉಂಡೆ, ಸಿಹಿ ತಿಂಡಿಗಳು ಸೇರಿದಂತೆ ಸಾಂಪ್ರದಾಯಿಕ ತಿನಿಸುಗಳನ್ನು ಮಹಿಳೆಯರು ಮನೆಯಲ್ಲಿ ತಯಾರಿಸಿ, ನೆರೆಹೊರೆಯವರು ಹಾಗೂ ಬಂಧು-ಬಳಗದವರೊಂದಿಗೆ ಹಂಚಿಕೊಂಡರು. ಮನೆ ಮನೆಗೆ ತೆರಳಿ ಪರಸ್ಪರ ಸಿಹಿತಿನಿಸುಗಳನ್ನು ಕೊಟ್ಟು-ತೆಗೆದುಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಆಚರಣೆಗಳ ಜೊತೆಗೆ ಪರಸ್ಪರ ಬಾಂಧವ್ಯವೂ ಮತ್ತಷ್ಟು ಗಟ್ಟಿಯಾಯಿತು.
ಗ್ರಾಮದ ವಿವಿಧ ಮನೆಗಳಲ್ಲಿ ಬೆಳಗ್ಗಿನಿಂದಲೇ ಪೂಜೆ, ನೈವೇದ್ಯ ಹಾಗೂ ಸಿಹಿತಿನಿಸುಗಳ ತಯಾರಿ ನಡೆಯುತ್ತಿದ್ದು, ಮಹಿಳೆಯರ ಸಂಭ್ರಮದಿಂದ ನಾಗರ ಪಂಚಮಿ ಹಬ್ಬಕ್ಕೆ ವಿಶೇಷ ಕಳೆ ಬಂದಿತ್ತು. ಸಂಪ್ರದಾಯ ಮತ್ತು ಭಕ್ತಿಯೊಂದಿಗೆ ಆಚರಿಸಲಾದ ನಾಗರ ಪಂಚಮಿ ಹಬ್ಬವು ಕುಟುಂಬಗಳಲ್ಲಿ ಸಂತಸ ಮೂಡಿಸುವುದರ ಜೊತೆಗೆ ಜನರಲ್ಲಿ ಪರಸ್ಪರ ಪ್ರೀತಿ, ಸ್ನೇಹ ಮತ್ತು ಸಹೋದರತ್ವದ ಭಾವನೆಯನ್ನು ಹೆಚ್ಚಿಸಿತು.

ನಾಗರ ಪಂಚಮಿ ನಮ್ಮ ಸಂಪ್ರದಾಯ

“ನಾಗರ ಪಂಚಮಿ ಕೇವಲ ಧಾರ್ಮಿಕ ಆಚರಣೆಯಲ್ಲ; ಇದು ನಮ್ಮ ಸಂಪ್ರದಾಯ, ಸಂಸ್ಕೃತಿ ಹಾಗೂ ಕುಟುಂಬ ಮತ್ತು ಸಮಾಜದ ನಡುವಿನ ಬಾಂಧವ್ಯವನ್ನು ಬೆಸೆಯುವ ಹಬ್ಬವಾಗಿದೆ. ಮನೆಗಳಲ್ಲಿ ಮಕ್ಕಳಿಗೆ ನಮ್ಮ ಆಚರಣೆಗಳ ಮಹತ್ವವನ್ನು ತಿಳಿಸುವುದು ಅಗತ್ಯ” ಎಂದು ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಮಹಿಳೆ ಸುಕನ್ಯಾ ಹನಗಂಡಿ ಎಂಬುವವರು ಅಭಿಪ್ರಾಯಪಟ್ಟರು.
“ಹಬ್ಬದ ಸಂದರ್ಭದಲ್ಲಿ ಮನೆಮಂದಿಯೆಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಿ, ಸಿಹಿತಿನಿಸುಗಳನ್ನು ಹಂಚಿಕೊಂಡು ಸಂಭ್ರಮಿಸುವುದು ನಮ್ಮ ಸಂಸ್ಕೃತಿಯ ಸೊಬಗು. ಇಂತಹ ಆಚರಣೆಗಳು ಮುಂದಿನ ಪೀಳಿಗೆಗೂ ನಮ್ಮ ಪರಂಪರೆಯನ್ನು ಪರಿಚಯಿಸುತ್ತವೆ” ಎಂದು ಇನ್ನೊಬ್ಬ ಹಿರಿಯ ಮಹಿಳೆಯೊಬ್ಬರು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.