Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
(ರಾಜ್ಯ ) ಜಿಲ್ಲೆ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆ | ಯೋಜನೆಯಡಿ ಕೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಿಸಲು ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಬಿಜಿ–ರಾಮ್–ಜಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರನ್ನು ಕಾಮಗಾರಿಗಳಲ್ಲಿ ತೊಡಗಿಸಿಕೊಂಡು ಗರಿಷ್ಠ ೨೦೦ ಕೂಲಿ ಕಾರ್ಮಿಕರಿಗೆ ಪ್ರತಿದಿನ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಮತ್ತು ಇಂಗಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಅರ್ಹ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶಾಶ್ವತ ಆಸ್ತಿಗಳನ್ನು ಸೃಜಿಸುವ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್–ಗ್ರಾಮೀಣ (ವಿಬಿಜಿ–ರಾಮ್–ಜಿ) ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.
ಈ ಯೋಜನೆಯಡಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಕೂಲಿ ಕಾರ್ಮಿಕರ ಹಾಜರಾತಿಯನ್ನು ಪ್ರತಿದಿನ ಎನ್‌ಎಂಎಂಎಸ್ ಆ್ಯಪ್ ಮೂಲಕ ಕಡ್ಡಾಯವಾಗಿ ದಾಖಲಿಸಬೇಕು ಹಾಗೂ ಹಾಜರಾತಿ ಮತ್ತು ಮಾನವ ದಿನಗಳ ಸೃಜನೆಗೆ ಸಂಬಂಧಿಸಿದಂತೆ ಯಾವುದೇ ಲೋಪವಾಗದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮೀಣ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳ ಕ್ರಿಯಾ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಆಧಾರಿತ ಕಾಮಗಾರಿಗಳನ್ನು ಸೇರ್ಪಡೆಗೊಳಿಸಬೇಕು. ಗ್ರಾಮಗಳ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕೆರೆ, ಜಲಸಂರಕ್ಷಣೆ, ಕೃಷಿ ಹೊಂಡ ಸೇರಿದಂತೆ ವೈಯಕ್ತಿಕ ಫಲಾನುಭವಿ ಆಧಾರಿತ ಕಾಮಗಾರಿಗಳನ್ನು ಗುರುತಿಸಿ ಅರ್ಹ ಕುಟುಂಬಗಳನ್ನು ಯೋಜನೆಯಡಿ ತೊಡಗಿಸಿಕೊಳ್ಳಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಜಾಬ್ ಕಾರ್ಡ್ ಮೇಳಗಳನ್ನು ಆಯೋಜಿಸಿ, ಅರ್ಹ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ಒದಗಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಗ್ರಾಮೀಣ ಕುಟುಂಬಗಳನ್ನು ಯೋಜನೆಯ ವ್ಯಾಪ್ತಿಗೆ ತರಬೇಕು ಹಾಗೂ ಅವರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) ಪ್ರಕಾಶ ದೇಸಾಯಿ, ತಾಂತ್ರಿಕ ಸಂಯೋಜಕ ವಿಶ್ವನಾಥ ಪಟ್ಟಣಶೆಟ್ಟಿ, ಐಇಸಿ ಸಂಯೋಜಕ ಮಡಿವಾಳಪ್ಪ ಬಿರಾದಾರ, ತಾಂತ್ರಿಕ ಸಹಾಯಕರಾದ ಚಂದ್ರಶೇಖರ ಆಡಿನ, ಉಕ್ಕಲಿ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಿಕಾರ್ಜುನ ಹಿಟ್ಟಿನಳ್ಳಿ, ಇಂಗಳೇಶ್ವರ ಗ್ರಾಮ ಪಂಚಾಯಿತಿ ಪಿಡಿಒ ಜಯಕುಮಾರ ದೇವರನಾವದಗಿ, ಕಾರ್ಯದರ್ಶಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಾಯಕಬಂಧುಗಳು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.