ಮುದ್ದೇಬಿಹಾಳ: ಮಹಡಿಯಿಂದ ಬಿದ್ದು ಕೂಲಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಪಟ್ಟಣದ ಮಹಾಂತೇಶ ನಗರದಲ್ಲಿ ವರದಿಯಾಗಿದೆ.
ರಮೇಶ ಹಣಮಂತ ಕೂಚಬಾಳ ಮೃತ ದುರ್ದೈವಿ. ಬೆಳಿಗ್ಗೆ ೧೧ ಗಂಟೆ ಸುಮಾರು ಮನೆಯ ಮೇಲೆ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ತಲೆಗೆ ಭಾರಿ ಪೆಟ್ಟಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ಉಪಚರಿಸಿಕೊಂಡು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ತೆರಳುವಾಗ ರಸ್ತೆ ಮಧ್ಯೆ ಸಾವನ್ನಪ್ಪಿದ್ದು ಸದರಿ ಮೈತನ ಮರಣದಲ್ಲಿ ಯಾವುದೇ ಸಂಶಯವಿರುವದಿಲ್ಲ ಎಂದು ಮೃತನ ಸಹೋದರ ಶಿವಪ್ಪ ಕೂಚಬಾಳ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Related Posts
Add A Comment