Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ

ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
(ರಾಜ್ಯ ) ಜಿಲ್ಲೆ

ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ, ಕೊಲ್ದಾರ ಹಾಗೂ ನಿಡಗುಂದಿ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿರುವ ಸಹಕಾರ ಸಂಘಗಳನ್ನು ಸಮಾಪನೆಗೊಳಿಸಿ ನೋಂದಣಿ ರದ್ದುಪಡಿಸಲು ಕ್ರಮವಹಿಸಲಾಗುತ್ತಿದೆ. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಈ ಸಹಕಾರ ಸಂಘಗಳು ನಿಯಮಾವಳಿಗಳಂತೆ ಕಾರ್ಯನಿರ್ವಹಿಸದೇ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದವು. ಈ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರು ಸಮಾಪನಾ ಆದೇಶ ಹೊರಡಿಸಿದ್ದು, ಸಮಾಪನಾಧಿಕಾರಿಯನ್ನೂ ನೇಮಕ ಮಾಡಿದ್ದಾರೆ.
ಈ ಸಂಘಗಳು ನೋಂದಾಯಿತ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಅವುಗಳ ಆಡಳಿತ ಮಂಡಳಿ ಸದಸ್ಯರು ಅಥವಾ ಮುಖ್ಯ ಕಾರ್ಯನಿರ್ವಾಹಕರ (ಕಾರ್ಯದರ್ಶಿ) ಮಾಹಿತಿ ಲಭ್ಯವಿರುವುದಿಲ್ಲ. ಅಲ್ಲದೆ, ಸುದೀರ್ಘ ಅವಧಿಯಿಂದ ಲೆಕ್ಕ ಪರಿಶೋಧನೆಯೂ ನಡೆದಿರುವುದಿಲ್ಲ.
ಆಕ್ಷೇಪಣೆಗೆ ೭ ದಿನಗಳ ಗಡುವು:
ಈ ಕೆಳಗಿನ ಸಹಕಾರ ಸಂಘಗಳೊಂದಿಗೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ವ್ಯವಹಾರಿಕ ಬಾಕಿ (ಕೊಡತಕ್ಕ ಅಥವಾ ಬರತಕ್ಕ ಬಾಕಿಗಳು) ಹೊಂದಿದ್ದರೆ, ಸೂಕ್ತ ದಾಖಲಾತಿಗಳೊಂದಿಗೆ ಈ ಪ್ರಕಟಣೆ ಹೊರಬಿದ್ದ ೦೭ ದಿನಗಳೊಳಗಾಗಿ ಬಸವನಬಾಗೇವಾಡಿಯ ಪಿಎಲ್‌ಡಿ ಬ್ಯಾಂಕ್ ಕಚೇರಿ ಕಟ್ಟಡದಲ್ಲಿರುವ ಸಹಕಾರ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ನಿಗದಿತ ಅವಧಿಯೊಳಗೆ ಯಾವುದೇ ಅರ್ಜಿ ಅಥವಾ ಆಕ್ಷೇಪಣೆಗಳು ಬಾರದಿದ್ದಲ್ಲಿ, ಆಕ್ಷೇಪಣೆಗಳಿಲ್ಲವೆಂದು ಪರಿಗಣಿಸಿ ನಿಯಮಾನುಸಾರ ಸಂಘಗಳ ಅಢಾವೆಯನ್ನು ಶೂನ್ಯಗೊಳಿಸಿ, ನೋಂದಣಿ ರದ್ದತಿಗೆ ಅಂತಿಮ ಕ್ರಮ ಕೈಗೊಳ್ಳಲಾಗುವುದು. ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಸಮಾಪನಾಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ಸಿದ್ದೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ನಿ., ಮಣ್ಣೂರು,ನೇಕಾರ ಸಹಕಾರ ಉತ್ಪಾದಕ ಸಹಕಾರ ಸಂಘ ನಿ., ನಿಡಗುಂದಿ ತಾಲೂಕಿನ ವಂದಾಲ, ಸಜ್ಜನ ಎಣ್ಣೆ ಹಿಂಡಿ ಉತ್ಪಾದಕರ ಸಹಕಾರ ಸಂಘ ನಿ., ನಿಡಗುಂದಿ, ಬಾಗೇವಾಡಿ ಗ್ರಾಮೋದ್ಯೋಗ ಕೈಗಾರಿಕಾ ಸಹಕಾರ ಸಂಘ ನಿ., ಬಸವನಬಾಗೇವಾಡಿ,ಶ್ರೀ ಗುರುಪರಮಾನಂದ ಪ್ರಾಥಮಿಕ ಗ್ರಾಹಕರ ಸಹಕಾರ ಸಂಘ, ದಿಂಡವಾರ, ದಿ ಬ.ಬಾಗೇವಾಡಿ ಹೈಸ್ಕೂಲ ಶಿಕ್ಷಕರ ಪತ್ತಿನ ಸಹಕಾರ ಸಂಘ, ಬಸವನಬಾಗೇವಾಡಿ, ಸುಜಲ ಕೈಮಗ್ಗ ಮತ್ತು ನೇಕಾರರ ಸಹಕಾರ ಸಂಘ ನಿಡಗುಂದಿ ತಾಲೂಕಿನ ಚಿಮ್ಮಲಗಿ,ಟಿಪ್ಪು ಸುಲ್ತಾನ ಅಲ್ಪಸಂಖ್ಯಾತರ ವಿವಿಧೋದ್ದೇಶಗಳ ಸಹಕಾರ ಸಂಘ, ಮನಗೂಳಿ,ಶ್ರೀ ಬನಶಂಕರಿ ನೇಕಾರರ ಸಹಕಾರ ಸಂಘ ನಿ., ಕೊಲ್ದಾರ, ಪ್ರಾಥಮಿಕ ಕೈಮಗ್ಗ ನೇಕಾರರ ಸಹಕಾರ ಸಂಘ ನಿ., ನಿಡಗುಂದಿ,ಶ್ರೀ ದಾನೇಶ್ವರಿ ಕೈಮಗ್ಗ ನೇಕಾರರ ಸಹಕಾರಿ ಸಂಘ ನಿ., ಮುತ್ತಗಿ, ಶ್ರೀ ಅಲೆಮಾರಿ ಜನಾಂಗದ ವಿವಿಧೋದ್ದೇಶಗಳ ಸಹಕಾರ ಸಂಘ ನಿ., ಬಸವನಬಾಗೇವಾಡಿ,ಶ್ರೀ ಭಾವಿ ಬಸವೇಶ್ವರ ವಿವಿಧೋದ್ಧೇಶಗಳ ಸಹಕಾರ ಸಂಘ ನಿ., ಬಳೂತಿ ಸೇರಿದಂತೆ ಇತರ ಸಹಕಾರ ಸಂಘಗಳು ಸೇರಿವೆ ಎಂದು ಬಸವನ ಬಾಗೇವಾಡಿಯ ಸಮಾಪನಾಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ

ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ಆ.೨೩ ರಂದು ವರುಣನ ಕೃಪೆಗಾಗಿ ೨೪ ಗಂಟೆಗಳ ಶಿವ ಸಪ್ತಾಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೨೩ ರಂದು ವರುಣನ ಕೃಪೆಗಾಗಿ ೨೪ ಗಂಟೆಗಳ ಶಿವ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ರುದ್ರಮುನಿ ಶ್ರೀ ಶಿವಯೋಗ ಮೌನ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕೆಲಸಕ್ಕಾಗಿ ಜಾಬ್ ಕಾರ್ಡು ಪಡೆಯೋದು ನಿಮ್ಮ ಹಕ್ಕು
    In (ರಾಜ್ಯ ) ಜಿಲ್ಲೆ
  • ಪ್ರತಿ ವಾರ್ಡ್ನಲ್ಲಿ ಭಾರತ ಜೋಡೋ ಯುವ ಸಂಘ ರಚನೆಗೆ ಅರ್ಜಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ಸ್ಥಗಿತಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ಯುವಶಕ್ತಿಯನ್ನು ಒಗ್ಗೂಡಿಸಿ ಸೌಹಾರ್ದ ಕರ್ನಾಟಕ ನಿರ್ಮಾಣಕ್ಕೆ ಮಹತ್ವದ ಹೆಜ್ಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.