ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಭಾರತ ಜೋಡೋ ಯುವ ಸಂಘವನ್ನು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸುವ ಪ್ರಕ್ರಿಯೆ ಆರಂಭಗೊಂಡಿದ್ದು,
ಪ್ರತಿ ವಾರ್ಡ್ಗೆ ಒಂದರಂತೆ, ಸರಾಸರಿ ೧೦,೦೦೦ ಜನಸಂಖ್ಯೆಗೆ ೧ ಸಂಘ ರಚಿಸಲು ತೀರ್ಮಾನಿಸಲಾಗಿದೆ. ಈ ಯೋಜನೆಯಡಿ ಪ್ರತಿ ಸಂಘಕ್ಕೆ ೧೦೦ ಜನ ಸದಸ್ಯರನ್ನು ನೋಂದಾಯಿಸಲು ಅವಕಾಶವಿದೆ. ೧೮ ರಿಂದ ೩೫ ವರ್ಷ ವಯೋಮಿತಿಯ ಆಸಕ್ತ ಯುವಕ-ಯುವತಿಯರು ಸಂಘದ ಸದಸ್ಯರಾಗಲು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಯುವಕ-ಯುವತಿಯರು ತಮ್ಮ ಆಧಾರ್ ಕಾರ್ಡ್ನೊಂದಿಗೆ bರಿಥಿs.ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್, ಮೊಬೈಲ್ ಆ್ಯಪ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ನೋಂದಣಿಗೆ ೧೦ ರೂ. ಶುಲ್ಕವಿದೆ. ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪಾಲಿಕೆಯ ಆಯುಕ್ತರ ಪ್ರಕಟಣೆ ತಿಳಿಸಿದೆ.
