ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕಿನ ಯಂಕಂಚಿ ಕುಂಟೋಜಿ ಹಿರೇಮಠ ಪೂಜ್ಯಶ್ರೀ ಅಭಿನವ ರುದ್ರಮುನಿ ಶಿವಾಚಾರ್ಯರು ಅವರ ಸಾರಥ್ಯದಲ್ಲಿ ಶ್ರಾವಣ ಮಾಸದ ನಿಮಿತ್ತ ಲೋಕ ಕಲ್ಯಾಣಾರ್ಥವಾಗಿ ಶಿವಯೋಗ ಮೌನ ಅನುಷ್ಠಾನವು ಆ.೨೧ರಿಂದ ಸೆ.೧೪ರವರೆಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.
ಲೋಕ ಕಲ್ಯಾಣ, ಶಾಂತಿ ಹಾಗೂ ಸರ್ವರ ಒಳಿತಿಗಾಗಿ ನಡೆಯಲಿರುವ ಈ ಧಾರ್ಮಿಕ ಅನುಷ್ಠಾನದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶಿವಾನುಗ್ರಹಕ್ಕೆ ಪಾತ್ರರಾಗಬೇಕೆಂದು ಆಯೋಜಕರು ಕೋರಿದ್ದಾರೆ.

