ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಜಿಲ್ಲೆಯಲ್ಲಿ ಆ. ೨೩ ರಿಂದ ೨೫ ರವರೆಗೆ ಪ್ರವಾಸ ಕೈಗೊಂಡಿದ್ದಾರೆ.
ಆ.೨೨ ರ ಸಂಜೆ ೬:೧೫ಕ್ಕೆ ಬೆಂಗಳೂರಿನಿಂದ ರೈಲಿನ ಮೂಲಕ ಹೊರಟು ಆ.೨೩ರ ಬೆಳಿಗ್ಗೆ ೫:೧೫ ಕ್ಕೆ ಆಲಮಟ್ಟಿ ತಲುಪಲಿದ್ದಾರೆ.ಆ.೨೩ ರಂದು ಮುದ್ದೇಬಿಹಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಾತ್ರೆಯ ಬೃಹತ್ ವೇದಿಕೆ ಕಾರ್ಯಕ್ರಮ ಉದ್ಘಾಟನೆಯಲ್ಲಿ ಭಾಗವಹಿಸುವರು. ಸಂಜೆ ೪.೩೦ ಕ್ಕೆ ಸಂಕಷ್ಟದಲ್ಲಿರುವ ಮದಭಾವಿ ತಾಂಡಾ ಮಹಿಳೆಯರೊಂದಿಗೆ ಸಂವಾದ ನಡೆಸುವರು.ಆ.೨೪ ರಂದು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸುರಕ್ಷತೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಫೋಸ್ ಕಾಯ್ದೆ-೨೦೧೩ರ ತರಬೇತಿ ಕಾರ್ಯಾಗಾರ ಉದ್ಘಾಟಿಸುವರು. ನಂತರ ದರ್ಗಾ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು.ನಂತರ ಇಂಡಿ ರಸ್ತೆಯಲ್ಲಿರುವ ಆಲಿಯಾಬಾದ್ ಪಾಂಗ್ರುನ್ ದೊಡ್ಡಿಯ ಕುರಿಗಾಹಿ ಮಹಿಳೆಯರನ್ನು ಭೇಟಿ ಸಮಸ್ಯೆ ಆಲಿಸುವರು.
ಆ.೨೫ ರಂದು ಬೆಳಿಗ್ಗೆ ೯:೩೦ ಕ್ಕೆ ಜಿಲ್ಲಾಸ್ಪತ್ರೆ ಆವರಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡುವರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಹಿಳಾ ದೌರ್ಜನ್ಯ ಪ್ರಕರಣಗಳು, ರಕ್ಷಣೆ ಹಾಗೂ ಕಾನೂನು ಕ್ರಮಗಳ ಕುರಿತು ಚರ್ಚೆಯಲ್ಲಿ ಭಾಗವಹಿಸುವರು.
ಆ.೨೫ ರಂದು ಸಂಜೆ ೫ ಗಂಟೆಗೆ ವಿಜಯಪುರದಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.
