Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
(ರಾಜ್ಯ ) ಜಿಲ್ಲೆ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿಂದುಳಿದ ವರ್ಗಗಳ ಧೀಮಂತ ನಾಯಕ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶೋಷಿತ, ದಮನಿತ ಹಾಗೂ ದೀನ-ದಲಿತ ಸಮುದಾಯಗಳ ಸಮಗ್ರ ಏಳಿಗೆಗಾಗಿ ಡಿ. ದೇವರಾಜ ಅರಸು ಅವರು ರೂಪಿಸಿ ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಡಿ. ದೇವರಾಜ ಅರಸು ಅವರು ಊಳುವವನೇ ಭೂ ಒಡೆಯ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಅನೇಕ ಭೂರಹಿತ ಗೇಣಿದಾರರಿಗೆ ಜಮೀನಿನ ಹಕ್ಕು ದೊರಕಿಸಿಕೊಟ್ಟು, ಸಮಾಜದಲ್ಲಿ ನೆಲೆಸಿದ್ದ ಅಸಮಾನತೆಯನ್ನು ಕೊನೆಗಾಣಿಸಿ ಆರ್ಥಿಕ ಸಮಾನತೆ ತರಲು ಶ್ರಮಿಸಿದರು. ಆ ಕಾಲದಲ್ಲೇ ಅವರು ಆರಂಭಿಸಿದ ಸ್ಟೈಪಂಡರಿ ಹಾಗೂ ಶೈಕ್ಷಣಿಕ ನೆರವಿನ ಯೋಜನೆಗಳು, ವಿದ್ಯಾರ್ಥಿವೇತನ ಯೋಜನೆಗಳಿಗೆ ಬಲವಾದ ತಳಪಾಯವಾಗಿವೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಅರಸು ಅವರು ಸಮಾಜದ ಹಿಂದುಳಿದವರಿಗೆ ಸಾಮಾಜಿಕವಾಗಿ ನ್ಯಾಯ ದೊರಕಿಸಿಕೊಡುವಲ್ಲಿ ಅಭೂತಪೂರ್ವ ಸುಧಾರಣೆಗಳನ್ನು ತಂದರು. ಜೀತಪದ್ಧತಿಯಂತಹ ಅಮಾನವೀಯ ಆಚರಣೆಗಳನ್ನು ಕಾನೂನುಬದ್ಧವಾಗಿ ತೊಡೆದುಹಾಕಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆವಸತಿ ನಿಲಯಗಳನ್ನು ಸ್ಥಾಪಿಸಿದರು. ಇಂದಿಗೂ ಸರ್ಕಾರದ ಈ ಸೌಲಭ್ಯಗಳನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದರು. ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಣಮಂತ ಬಿ. ಪೂಜಾರಿ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನ ಸನ್ಮಾನಿಸಿ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಡಿಎಸ್‌ಪಿ ಎಂ.ಎ. ಉಪಾಸೆ, ಜಿಲ್ಲಾ ಖಜಾನಾಧಿಕಾರಿ ಆನಂದ ಮುಚ್ಚಂಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಣಮಂತ ಕಾಲತಿಪ್ಪಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ದೇವರಾಜ ಅರಸು ಅಭಿಮಾನಿಗಳ ಬಳಗದ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಅರಸು ಭಾವಚಿತ್ರ ಮೆರವಣಿಗೆ

ಸಮಾರಂಭಕ್ಕೂ ಮುನ್ನ ಬೆಳಿಗ್ಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭವ್ಯ ಮೆರವಣಿಗೆಗೆ ಅದ್ಧೂರಿ ಚಾಲನೆ ನೀಡಲಾಯಿತು.
ವಿವಿಧ ಜಾನಪದ ಕಲಾತಂಡಗಳ ಕಲಾ ವೈಭವದೊಂದಿಗೆ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳ ಮೂಲಕ ಸಾಗಿದ ಮೆರವಣಿಗೆಯು ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಯಶಸ್ವಿಯಾಗಿ ಸಮಾವೇಶಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.