Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಜಲಾಶಯ ಸುರಕ್ಷಿತ, ಗುಣಮಟ್ಟ ಉತ್ತಮ :ಪ್ರೊ.ಜೋಷಿ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಜಲಾಶಯ ಸುರಕ್ಷಿತ, ಗುಣಮಟ್ಟ ಉತ್ತಮ :ಪ್ರೊ.ಜೋಷಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಆಣೆಕಟ್ಟು ಸುರಕ್ಷತಾ ಕಾಯ್ದೆ–೨೦೨೧ರ ಅನ್ವಯ ಪ್ರೊ.ಶರದ್ ಜೋಷಿ ನೇತೃತ್ವದ ೮ ಜನರ ನೀರಾವರಿ ತಜ್ಞರ ತಂಡವು ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಆಲಮಟ್ಟಿ ಜಲಾಶಯದ ಸಮಗ್ರ ಸುರಕ್ಷತಾ ಪರಿಶೀಲನೆ ನಡೆಸಿದೆ.
ತಜ್ಞರು ಜಲಾಶಯದ ಬಾಳಿಕೆ ಮತ್ತು ನೀರಿನ ಸೋರಿಕೆ, ಭೂಕಂಪ ನಿರೋಧಕ ಸಾಮರ್ಥ್ಯ, ಗೇಟ್‌ಗಳ ಕಾರ್ಯಕ್ಷಮತೆ, ಸಿವಿಲ್ ಕಾಮಗಾರಿಗಳು ಮತ್ತು ಕಾಫರ್ ಜಲಾಶಯಗಳ ಗುಣಮಟ್ಟ ಈ ಅಂಶಗಳನ್ನು ಪರಿಶೀಲಿಸಿದರು.
ತಜ್ಞರ ಅಭಿಪ್ರಾಯ
ತಂಡದ ನೇತೃತ್ವ ವಹಿಸಿದ್ದ ಪ್ರೊ. ಶರದ್ ಜೋಷಿ ಮಾತನಾಡಿ, “ಜಲಾಶಯದ ಗುಣಮಟ್ಟ ಉತ್ತಮವಾಗಿದೆ. ಸುರಕ್ಷತೆ ಮತ್ತು ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಪರಿಶೀಲಿಸಿದ್ದೇವೆ” ಎಂದು ತಿಳಿಸಿದರು.
ತಜ್ಞರು ಪ್ರತ್ಯೇಕ ವರದಿಗಳನ್ನು ಸಲ್ಲಿಸಿದ ಬಳಿಕ ಅವುಗಳನ್ನು ಕ್ರೋಢೀಕರಿಸಿ ಡಿಸೆಂಬರ್ ೨೦೨೬ರೊಳಗೆ ರಾಜ್ಯ ಸರ್ಕಾರಕ್ಕೆ ಸಮಗ್ರ ಮೌಲ್ಯಮಾಪನ ವರದಿ ಸಲ್ಲಿಸಲಾಗುವುದು. ಅಗತ್ಯವಿರುವ ತುರ್ತು ಕ್ರಮಗಳನ್ನೂ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.
ಸಮಿತಿ ಸದಸ್ಯರಾದ ಶಿವಪ್ರಸಾದ, ಎಸ್.ಎಲ್. ರಾಜಶೇಖರ, ಕೆ. ಸತ್ಯನಾರಾಯಣ, ಅಮರನಾಥ ಹೆಗಡೆ, ಕಮಲಶೇಖರನ್, ಪ್ರಾಣೇಶ ಮುರನಾಳ, ಎಸ್. ರಂಗರಾಮ, ಮುಖ್ಯ ಎಂಜಿನಿಯರ್ ಡಿ. ಬಸವರಾಜ, ಬಿ.ಎಸ್. ಪಾಟೀಲ, ಕೊಳ್ಳಿ, ವಿಠ್ಠಲ ಜಾಧವ, ರವಿ ಚಂದ್ರಗಿರಿ ಸೇರಿದಂತೆ ಅಧಿಕಾರಿಗಳು ಇದ್ದರು.

ರಾಜ್ಯದ ೨೩೧ ಅಣೆಕಟ್ಟುಗಳ ಪರಿಶೀಲನೆ

ರಾಜ್ಯದಲ್ಲಿರುವ ಒಟ್ಟು ೨೩೧ ಅಣೆಕಟ್ಟುಗಳ ಸುರಕ್ಷತಾ ಪರಿಶೀಲನೆಗೆ ೧೬ ತಂಡಗಳನ್ನು ರಚಿಸಲಾಗಿದೆ.
ಪರಿಶೀಲನೆ ಬಳಿಕ ಜಲಾಶಯಗಳನ್ನು ಸಂಪೂರ್ಣ, ಭಾಗಶಃ ಮತ್ತು ಅಲ್ಪ ಪ್ರಮಾಣದ ದುರಸ್ತಿ ಅಗತ್ಯವಿರುವ ಮೂರು ವರ್ಗಗಳಲ್ಲಿ ವಿಂಗಡಿಸಲಾಗುವುದು.
ಪ್ರೊ. ಜೋಷಿ ಅವರು “ಜಲಾಶಯಗಳಿಂದಲೇ ಭೂಕಂಪ ಸಂಭವಿಸುತ್ತದೆ ಎಂಬುದು ತಪ್ಪು ಕಲ್ಪನೆ” ಎಂದು ಸ್ಪಷ್ಟಪಡಿಸಿದರು. ಹಾಗೂ “ನದಿ ಪಾತ್ರಗಳ ಒತ್ತುವರಿ ತೆರವು ಅಗತ್ಯ” ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.