Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
(ರಾಜ್ಯ ) ಜಿಲ್ಲೆ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರಕಾರ ಅತ್ಯಾ‍ಧುನಿಕ ಸೌಲಭ್ಯಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗೂ ಕಲ್ಪಿಸಿದ್ದು, ಹಾಗಾಗಿ ಕಾಲೇಜ್ ನಲ್ಲಿ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು, ಕನಸು ನನಸು ಮಾಡಿಕೊಳ್ಳುವ ಮೂಲಕ ಹೆತ್ತವರಿಗೆ, ಹುಟ್ಟಿದೂರಿಗೆ ಹಾಗೂ ಶಿಕ್ಷಕರ ಕೀರ್ತಿ ಹೆಚ್ಚಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗುರನಗೌಡ ಬಿರಾದಾರ ಹೇಳಿದರು.
ಕೊಲ್ಹಾರ ತಾಲೂಕಿನ ಕುಪಕಡ್ಡಿಯಲ್ಲಿ ಹೊಸದಾಗಿ ಪ್ರಾರಂಭವಾದ ಸರಕಾರಿ ಪದವಿ ಪೂರ್ವ ಕಾಲೇಜಿನ ೨೦೨೬-೨೭ ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಎಚ್. ಎಲ್. ದೊಡಮನಿ ಮಾತನಾಡಿ, ಊರಿನ ಶಿಕ್ಷಣ ಪ್ರೇಮಿಗಳ ಪರಿಶ್ರಮದಿಂದ ನಮ್ಮ ಗ್ರಾಮಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಮಂಜೂರಾಗಿದ್ದು ಇದು ಗ್ರಾಮೀಣ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ಸಹಕಾರಿಯಾಗಿದೆ. ಕಾಲೇಜು ಮಂಜೂರಿಗೆ ಶ್ರಮಿಸಿದ ಗ್ರಾಮದ ಎಲ್ಲ ಧುರೀಣರಿಗೆ ಕೃತಜ್ಞತೆಗಳನ್ನು ಸಲ್ಲಿಸಿ ಸಮುದಾಯದ ಸಹಭಾಗಿತ್ವದಿಂದ ಮಾತ್ರ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಎಂದ ಅವರು, ಕುಪಕಡ್ಡಿ ಗ್ರಾಮಸ್ಥರು ಕಾಲೇಜು ಅಭಿವೃದ್ಧಿಗೆ ಸಕಲ ಸಹಕಾರ ನೀಡುತ್ತಿರುವದು ಮಾದರಿ ಕಾರ್ಯ ಎಂದು ಶ್ಲಾಘಿಸಿದರು.
ಕಾಲೇಜಿಗೆ ೨೫೦೦೦ ರೂ. ಮೌಲ್ಯದ ಪೀಠೋಪಕರಣಗಳನ್ನು ದೇಣಿಗೆ ನೀಡಿದ ಉದ್ಯಮಿ ಹಾಗೂ ಪಿಕೆಪಿಎಸ್ ನಿರ್ದೇಶಕ ಉಮೇಶ ಇಂಡಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪ್ರೌಢಶಾಲೆ ಮುಖ್ಯ ಶಿಕ್ಷಕಿ ರೇಖಾ ಟಿ. ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವದು ಮುಖ್ಯವಾಗಿದ್ದು ಸಂಸ್ಕಾರವಿಲ್ಲದ ಶಿಕ್ಷಣ ನಮಗೆ ಬೇಕಾಗಿಲ್ಲ ಎಂದರು. ಕಾಲೇಜಿನ ನಾಮಫಲಕ ದೇಣಿಗೆ ನೀಡಿದ ನರಸು ಪತ್ತಾರ ಹಾಗೂ ನಗದು ಕಾಣಿಕೆ ನೀಡಿದ ಹಿರಿಯ ಶಿಕ್ಷಕ ಅಪ್ಪಾಸಾಹೇಬ ಕುಲಕರ್ಣಿ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.
ಗ್ರಾಮದ ಹಿರಿಯರು, ಪಿಕೆಪಿಎಸ್ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾದ ಸಂಗನಗೌಡ ಬಿರಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪಿಕೆಪಿಎಸ್ ಅಧ್ಯಕ್ಷರಾದ ದೊಡ್ಡನಗೌಡ ಬಿರಾದಾರ, ಎಸ್ ಡಿಎಮ್ ಸಿ ಮಾಜಿ ಅಧ್ಯಕ್ಷರಾದ ಉದಯಕುಮಾರ ಹಳ್ಳಿ, ಎಸ್ ಡಿ ಎಮ್ ಸಿ ಅಧ್ಯಕ್ಷ ಸಂಗು ಉಗ್ರಾಣ, ಗ್ರಾ ಪಂ ಮಾಜಿ ಸದಸ್ಯರಾದ ಮಹಾದೇವ ಚಲವಾದಿ, ಈಶ್ವರ ಕೋಲ್ಹಾರ, ಅಮೀನಸಾಬ ಪೆಂಡಾರಿ, ಪಿಕೆಪಿಎಸ್ ಸದಸ್ಯ ಪ್ರಕಾಶ ಬಿರಾದಾರ, ಶಾಂತು ಹಲಗಲಿ, ಸತ್ಯಪ್ಪ ಮದಗುಣಕಿ, ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೆ ಸಂಗನಗೌಡ ಬಿರಾದಾರ, ದೊಡ್ಡನಗೌಡ ಬಿರಾದಾರ, ಉದಯಕುಮಾರ ಹಳ್ಳಿ, ಯುವ ಧುರೀಣ ಚಂದ್ರು ಅಂಬಿಗೇರ, ಮಹಾದೇವ ಚಲವಾದಿ ಸಹಕಾರ ನೀಡಿದರು.
ಕುಮಾರಿ ಭಾಗ್ಯಶ್ರೀ ಮ್ಯಾಗಾಡಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರಿಯಂಕಾ ಇಂಡಿ ಹಾಗೂ ಸಂಗಡಿಗರು ಸ್ವಾಗತ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅತಿಥಿ ಉಪನ್ಯಾಸಕ ಯಲ್ಲಪ್ಪ ಹಳಬರ ಸ್ವಾಗತಿಸಿದರು. ಡಾ:ಲಕ್ಷ್ಮೀ ಅಂಗಡಿ ನಿರೂಪಿಸಿದರು. ಶ್ರೀಕಾಂತ ಪೂಜಾರಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.