Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನೈತಿಕ ಚಟುವಟಿಕೆಗಳ ತಾಣ ಅಫ್ಜಲ್ಪುರ್ ತಹಸೀಲ್ ಕಚೇರಿ ಆವರಣ
(ರಾಜ್ಯ ) ಜಿಲ್ಲೆ

ಅನೈತಿಕ ಚಟುವಟಿಕೆಗಳ ತಾಣ ಅಫ್ಜಲ್ಪುರ್ ತಹಸೀಲ್ ಕಚೇರಿ ಆವರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಫಜಲಪುರ ತಾಲೂಕು ಆಡಳಿತದ ಮೂಗಿನಡಿಯಲ್ಲೇ ಅನೈರ್ಮಲ್ಯ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ವಿಶೇಷ ವರದಿ
ಅಫಜಲಪುರ: ತಾಲೂಕು ಆಡಳಿತದ ಹೃದಯಭಾಗವಾದ ಪಟ್ಟಣದ ತಹಸೀಲ್ದಾರ್ ಕಚೇರಿಯ ಆವರಣವೇ ಇದೀಗ ಅನೈತಿಕ ದಂಧೆಗಳು ಮತ್ತು ನಶೆ ವ್ಯಸನಿಗಳ ಅಡ್ಡೆಯಾಗಿ ಮಾರ್ಪಟ್ಟಿರುವುದು ದುರಂತ.
ಸಾರ್ವಜನಿಕರು ತಮ್ಮ ನಿತ್ಯದ ಕೆಲಸ-ಕಾರ್ಯಗಳಿಗಾಗಿ ನಿತ್ಯ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡುವ ಸರ್ಕಾರಿ ಕಚೇರಿಯ ಮೂತ್ರಾಲಯ ಹಾಗೂ ಹಿಂಭಾಗದ ಆವರಣದಲ್ಲಿ ಅಕ್ರಮ ಚಟುವಟಿಕೆಗಳ ಕರಾಳ ಮುಖ ಬಯಲಾಗಿದೆ.
ಕಚೇರಿಯ ಮೂತ್ರ ವಿಸರ್ಜನೆ ಮಾಡುವ ಜಾಗದಲ್ಲಿ ನಶೆ ಬರಿಸುವ ನಿಷೇಧಿತ ಕೆಮ್ಮಿನ ಔಷಧದ (Cough Syrup) ಖಾಲಿ ಬಾಟಲಿಗಳು ಹಾಗೂ ನಿರೋಧಗಳು (Condoms) ಅಸಹ್ಯಕರ ರೀತಿಯಲ್ಲಿ ಎಲ್ಲೆಂದರಲ್ಲಿ ಬಿದ್ದಿವೆ. ಇಷ್ಟೇ ಅಲ್ಲದೆ, ಆವರಣದ ಪಕ್ಕದಲ್ಲಿ ಮದ್ಯದ ಖಾಲಿ ಬಾಟಲಿಗಳು, ಸಿಗರೇಟ್ ತುಂಡುಗಳು, ಗುಟ್ಕಾ ಪ್ಯಾಕೆಟ್‌ಗಳು ಹಾಗೂ ಅಕ್ರಮ ಜೂಜಾಟಕ್ಕೆ ಬಳಸುವ ಚೀಟಿಗಳು ರಾಶಿ ರಾಶಿಯಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ.
ಕಣ್ಮುಚ್ಚಿ ಕುಳಿತ ಆಡಳಿತ ವ್ಯವಸ್ಥೆ: ತಾಲೂಕಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕಾದ ತಹಸೀಲ್ದಾರ್ ಕಚೇರಿಯ ಆವರಣದಲ್ಲೇ ಇಂತಹ ಸಮಾಜಘಾತುಕ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಕಚೇರಿಗೆ ಸೂಕ್ತ ಸಿಸಿಟಿವಿ ಕಣ್ಗಾವಲು ಹಾಗೂ ರಾತ್ರಿ ವೇಳೆ ಭದ್ರತಾ ಸಿಬ್ಬಂದಿಯ ಕೊರತೆಯೇ ಇಂತಹ ಅಕ್ರಮಗಳಿಗೆ ದಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸಾರ್ವಜನಿಕರ ಆಗ್ರಹ: ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು, ಕಚೇರಿ ಆವರಣದಲ್ಲಿ ನೈರ್ಮಲ್ಯ ಕಾಪಾಡಬೇಕು. ರಾತ್ರಿ ವೇಳೆಯಲ್ಲಿ ನಿರಂತರ ಪೊಲೀಸ್ ಗಸ್ತು ನಿಯೋಜಿಸಿ, ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ನಾಗರಿಕರು ಮತ್ತು ಸಂಘ-ಸಂಸ್ಥೆಗಳು ತೀವ್ರವಾಗಿ ಒತ್ತಾಯಿಸಿವೆ.

*ಮಹಿಳೆಯರು, ನಾಗರಿಕರ ಪರದಾಟ

ನ್ಯಾಯ, ಪಹಣಿ, ಜಾತಿ-ಆದಾಯ ಪ್ರಮಾಣಪತ್ರ ಸೇರಿದಂತೆ ನಾನಾ ಕೆಲಸಗಳಿಗೆ ತಾಲೂಕು ಕಚೇರಿಗೆ ಬರುವ ಮಹಿಳೆಯರು ಹಾಗೂ ಸಾರ್ವಜನಿಕರು ಮೂತ್ರಾಲಯದ ಕಡೆ ಮುಖ ಮಾಡಲೂ ಹೇಸಿಗೆ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಚೇರಿ ಆವರಣದಲ್ಲಿ ಕುಡುಕರಿಗೆ ಏನೂ ಕೆಲಸ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.