Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷಿ & ತೋಟಗಾರಿಕೆ ಇಲಾಖೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ್
(ರಾಜ್ಯ ) ಜಿಲ್ಲೆ

ಕೃಷಿ & ತೋಟಗಾರಿಕೆ ಇಲಾಖೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಕೃಷಿಯನ್ನೇ ಪ್ರಮುಖ ಕಸುಬನ್ನಾಗಿಸಿಕೊಂಡಿರುವ ರೈತರು ಸಾಂಪ್ರದಾಯಿಕ ಬೆಳೆಗಳೊಂದಿಗೆ ತೋಟಗಾರಿಕೆ ಬೆಳೆಗಳನ್ನೂ ಬೆಳೆಯುವ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯ ಗಳಿಸಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇಂಡಿ ತಾಲ್ಲೂಕು ಯೋಜನಾಧಿಕಾರಿ ನಟರಾಜ್ ಎಲ್.ಎಂ. ಹೇಳಿದರು.
ಚಡಚಣ ತಾಲೂಕಿನ ಲೋಣಿ ಬಿ.ಕೆ. ವಲಯದ ಲಮಾಣಿಹಟ್ಟಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿ ‘ತೋಟಗಾರಿಕೆ ಬೆಳೆಗಳ ಬೇಸಾಯ ಮತ್ತು ತಾಂತ್ರಿಕತೆ’ ಕುರಿತು ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನಿತ್ಯ ಜೀವನದ ಪ್ರಮುಖ ಕಸುಬು ಕೃಷಿಯಾಗಿರುವುದರಿಂದ ರೈತರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ, ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಕಡಿಮೆ ಅವಧಿಯಲ್ಲಿ ಉತ್ತಮ ಇಳುವರಿ ಹಾಗೂ ಹೆಚ್ಚಿನ ಆದಾಯ ನೀಡುವ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದರಿಂದ ರೈತರ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಹಾಯಕ ತೋಟಗಾರಿಕೆ ಅಧಿಕಾರಿ ರಮೇಶ ರಾಠೋಡ ಅವರು ತೋಟಗಾರಿಕೆ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಅನುದಾನಗಳು, ಸೌಲಭ್ಯಗಳು ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ರೈತ ಸಂಪರ್ಕ ಕೇಂದ್ರದ ಅಧಿಕಾರಿ ಪ್ರಭು ಅರವತ್ತಿ ಅವರು ತೋಟಗಾರಿಕೆ ಬೆಳೆಗಳನ್ನು ಯಾವ ರೀತಿಯಲ್ಲಿ ಹಾಗೂ ಯಾವ ವಿಧಾನದಲ್ಲಿ ಬೆಳೆಯಬೇಕು, ಕೃಷಿಯಲ್ಲಿ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ವಿಧಾನ, ಬೆಳೆ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕ ಮಹಾಂತೇಶ್ ವಿ.ಎ.ಸ್ವಾಗತಿಸಿದರು. ತಾಲ್ಲೂಕು ಕೃಷಿ ಮೇಲ್ವಿಚಾರಕ ಸುದೀಪ್ ಎಸ್.ಕೆ. ವಂದಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಶೈಲ್ ಬಿರಾದಾರ, ಜಾನಕಿ ಬಿರಾದಾರ, ಅನಿತಾ ಬಿರಾದಾರ, ಸವಿತಾ ಬಿರಾದಾರ,ಸ್ಥಳೀಯ ಸೇವಾಪ್ರತಿನಿಧಿ ಲಕ್ಷ್ಮೀ ಹಿರೇಮಠ ಸೇರಿದಂತೆ ಸಂಘದ ಸದಸ್ಯರು ಹಾಗೂ ರೈತರು ಉಪಸ್ಥಿತರಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.