ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಸ್ಲಿಂ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದವರು ನಿಗಮದ ಸ್ವಾವಲಂಬಿ ಸಾರಥಿ ಯೋಜನೆ, ವ್ಯಾಪಾರ ಉದ್ಯಮ ನೇರ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ (ಫ್ರೆಶ್), ಗಂಗಾ ಕಲ್ಯಾಣ ಯೋಜನೆ, ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ ಹಾಗೂ ಸಾಂತ್ವನ ಯೋಜನೆಗಳಡಿ ಸೌಲಭ್ಯಕ್ಕಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಿದೇಶಿ ವಿದ್ಯಾಭ್ಯಾಸ ಸಾಲ ಹಾಗೂ ಗಂಗಾ ಕಲ್ಯಾಣ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ವಯಸ್ಸು ೧೮ ರಿಂದ ೫೫ ವರ್ಷಗಳೊಳಗಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ನಿಗಮದ ಅಧಿಕೃತ ಜಾಲತಾಣದ ಮೂಲಕವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯ ಮುದ್ರಿತ ಪ್ರತಿಯನ್ನು ಜಿಲ್ಲಾ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ. ಆಸಕ್ತರು ಸೆಪ್ಟೆಂಬರ್ ೧೭ರೊಳಗಾಗಿ hಣಣಠಿs://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರವನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೭೮೩೪೪ ಅಥವಾ ೮೨೭೭೯೪೪೨೦೯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
