ವಿಜಯಪುರ: ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇಂದು ವಿವಿಧ ನಿಗಮ ಮಂಡಳಿಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಜರುಗಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶನಿವಾರ ನಗರದ ಪಿಡಿಜೆ ಕಾಲೇಜ್ ನಲ್ಲಿ ನಡೆದಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಉದ್ಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು. ಯಾವುದೇ ಪರೀಕ್ಷಾ ಕೇಂದ್ರದಿಂದ ದೂರಿಗೆ ಆಸ್ಪದ ನೀಡದೇ ಪರೀಕ್ಷಾ ನಿಯಮಗಳನ್ನುನುಸರಿಸಿ,ವಹಿಸಿಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ವೀಕ್ಷಕರಾದ ಎಸ್.ಎ ಮುಜಾವರ್,ಉಪ ಮುಖ್ಯ ಪರೀಕ್ಷಾ ಅಧೀಕ್ಷಕರಾದ ಎ.ಎಸ್.ಮೋಟಗಿ, ಎಸ್.ಎನ್ ಗೌಡರ್ ಸೇರಿದಂತೆ ವಿಚಕ್ಷಣಾ ದಳ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.
Related Posts
Add A Comment