ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ ಸಹಯೋಗದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆ.೨೮ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೧೧ ಗಂಟೆಗೆ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
