Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ
(ರಾಜ್ಯ ) ಜಿಲ್ಲೆ

ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಾಶ್ ಕಾಯ್ದೆ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಈ ಕಾಯ್ದೆಯ ಉದ್ದೇಶ ಸಫಲಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತಿಯಲ್ಲಿ ಮಂಗಳವಾರ ನಡೆದ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಟೇಲ್, ರೆಸಾರ್ಟ್ ಮತ್ತಿತರ ಕಡೆಗಳಲ್ಲಿ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಪಾಶ್ ಕಾರ್ಯ ನಿರ್ವಹಿಸುವಂತಾಗಲಿ. ತನ್ಮೂಲಕ ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಗಾಗ ಪಾಶ್ ತರಬೇತಿ ಆಯೋಜಿಸಲು ಸಲಹೆ ಮಾಡಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಯುವಂತೆ ನೋಡಿಕೊಳ್ಳಬೇಕು ಎಂದೂ ತಾಕೀತು ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಿರುವ ಅಂಗನವಾಡಿಗಳಲ್ಲಿ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಕೇಂದ್ರಗಳಿಗೆ ಭೇಟಿ ನೀಡಬೇಕು. ಅಂಗನವಾಡಿಗಳಲ್ಲಿ ಸಮರ್ಪಕ ಪೌಷ್ಟಿಕ ಆಹಾರ ಒದಗಿಸಲು ಖಚಿತಪಡಿಸಿಕೊಳ್ಳಬೇಕು ಸೂಚಿಸಿದರು.
ಜಿಲ್ಲೆಯ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ, ಎಲ್ಲೆಲ್ಲಿ ತೊಂದರೆ ಇದೆಯೋ ಅಲ್ಲಿ ಪರಿಶೀಲಿಸುವ ಮೂಲಕ ಜನರಿಗೆ ಶುದ್ಧ ನೀರು ಸರಬರಾಜು ಮಾಡಬೇಕು ಎಂದರು.
ಸಭೆ ಬಳಿಕ, ಆಗಮಿಸಿದ ಮಹಿಳೆಯರ ಕುಂದು ಕೊರತೆ ಸಹಾನುಭೂತಿಯಿಂದ ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಇದ್ದು ಮಹಿಳೆಯರ ಕುಂದು ಕೊರತೆ ಆಲಿಸಿ, ಮಹಿಳಾ ಆಯೋಗದ ಅಧ್ಯಕ್ಷರೊಂದಿಗೆ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ರಿಷಿ ಆನಂದ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ. ಸಂತೋಷಕುಮಾರ ಎಚ್. ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಕೆರೆಗಳಿಗೆ ನೀರು ಹರಿಸಿ

ಪಾಂಗ್ರೂನ್ ದೊಡ್ಡಿಯಲ್ಲಿ ವಾಸವಾಗಿರುವ ಜನರು ಹಾಗೂ ಸುತ್ತಲಿನವರಿಗೆ ಆ ಭಾಗದಲ್ಲಿರುವ ಕೆರೆಗಳಿಗೆ ನೀರು ಹರಿಸಿ, ಕುರಿಗಳಿಗೆ ಕುಡಿಯಲು ನೀರು ಕಲ್ಪಿಸಲು ಅನುಕೂಲ ಮಾಡಿಕೊಡಿ. ಸರ್ಕಾರದ ಯೋಜನೆಗಳ ಬಗ್ಗೆ ಅಲ್ಲಿನ ಜನತೆಗೆ ತಿಳುವಳಿಕೆ ನೀಡಬೇಕು. ಅಲ್ಲಿನ ಜನರಿಗೆ ಸಾರಿಗೆ ಸೌಕರ್ಯ ಕಲ್ಪಿಸಬೇಕು. ದೊಡ್ಡಿಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದ ಅವರು, ಒಟ್ಟಾರೆ ಕುಡಿಯುವ ನೀರು, ಶೌಚಾಲಯ, ಸಮುದಾಯ ಶೌಚಾಲಯಕ್ಕೆ ಆದ್ಯತೆ ನೀಡಬೇಕು ಎಂದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.