Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ
(ರಾಜ್ಯ ) ಜಿಲ್ಲೆ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ೧೨ ದಿನಗಳ ಸೇನಾ ನೇಮಕಾತಿ ಪ್ರಕ್ರಿಯೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಸೆ. ೧೦ ರಿಂದ ೨೨ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೃಹತ್ ಅಗ್ನಿವೀರ ನೇಮಕಾತಿ ರ್‍ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಹಾಗೂ ಮಂಗಳೂರಿನ ಸೇನಾ ನೇಮಕಾತಿ ಅಧಿಕಾರಿ ಕರ್ನಲ್ ಸೋಮು ಅವರು ತಿಳಿಸಿದ್ದಾರೆ. ಜೂ.೧ರಿಂದ ೧೨ರವರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಾರ್ಟ್ಲಿಸ್ಟ್ ಆಗಿರುವ ಅಭ್ಯರ್ಥಿಗಳು ಈ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಕರ್ನಾಟಕದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳಿಗೆ ರ‍್ಯಾಲಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್ಮನ್ (೧೦ನೇ ತರಗತಿ) ಹಾಗೂ ಟ್ರೇಡ್ಸ್ಮನ್ (೮ನೇ ತರಗತಿ) ವಿಭಾಗಗಳ ಹುದ್ದೆಗಳಿಗೆ ಅಭ್ಯರ್ಥಿಗಳು ಸ್ಪರ್ಧಿಸಬಹುದಾಗಿದೆ. ಇದರೊಂದಿಗೆ ಆರ್ ಟಿ, ಜೆಸಿಒ, ಎಸ್ ಒಎಲ್, ಎನ್ ಎ, ಸೆಪ್ ಫಾರ್ಮಾ ಹಾಗೂ ಎಚ್ ಎವಿ ಇಡಿಎನ್ ಸೇರಿದಂತೆ ಕಾಯಂ ಹುದ್ದೆಗಳಿಗಾಗಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳಿಂದ ಶಾರ್ಟ್ಲಿಸ್ಟ್ ಆಗಿರುವ ಅಭ್ಯರ್ಥಿಗಳೂ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೇನಾ ನೇಮಕಾತಿ ಅಧಿಕಾರಿ ಕರ್ನಲ್ ಸೋಮು ತಿಳಿಸಿದ್ದಾರೆ. ಈಗಾಗಲೇ ಸಿಇಇ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ನೇಮಕಾತಿ ಜಾಲತಾಣ ರಿoiಟಿiಟಿಜiಚಿಟಿಚಿಡಿmಥಿ.ಟಿiಛಿ.iಟಿ ಗೆ ಭೇಟಿ ನೀಡಿ, ತಮ್ಮ ಲಾಗಿನ್ ಐಡಿ ಅಥವಾ ನೋಂದಾಯಿತ ಇ-ಮೇಲ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ವಯೋಮಿತಿ, ಶೈಕ್ಷಣಿಕ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಇತರೆ ನಿಯಮಗಳ ಕುರಿತು ಅಧಿಕೃತ ಜಾಲತಾಣದಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ ತಿಳಿಸಿದ್ದಾರೆ. ಪಾರದರ್ಶಕ ನೇಮಕಾತಿ: ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದ್ದು, ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಅಂತಿಮ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.ಅಭ್ಯರ್ಥಿಗಳು ದಲ್ಲಾಳಿಗಳು ಅಥವಾ ಮಧ್ಯವರ್ತಿಗಳ ಸುಳ್ಳು ಭರವಸೆಗಳಿಗೆ ಒಳಗಾಗದೆ, ಅಧಿಕೃತ ಸೇನಾ ನೇಮಕಾತಿ ಜಾಲತಾಣದಲ್ಲಿ ಪ್ರಕಟವಾಗುವ ಮಾಹಿತಿಯನ್ನು ಮಾತ್ರ ಆಧರಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೇನಾ ನೇಮಕಾತಿ ಕಚೇರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನೇಮಕಾತಿಗೆ ಸಂಬಂಧಿಸಿದಂತೆ ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಯಾರಾದರೂ ಭರವಸೆ ನೀಡಿದರೆ ಅಂತಹ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಭ್ಯರ್ಥಿಗಳಿಗೆ ಪ್ರಕಟಣೆಯಲ್ಲಿ ಸೇನಾ ನೇಮಕಾತಿ ಅಧಿಕಾರಿಗಳು ಸಲಹೆ ಮಾಡಿದ್ದಾರೆ.

BIJAPUR NEWS bjp congress patil public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ

ಆ.೨೮ರಂದು ಶ್ರೀ ನುಲಿಯ ಚಂದಯ್ಯ ಜಯಂತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಆ.೨೮ರಂದು ಶ್ರೀ ನುಲಿಯ ಚಂದಯ್ಯ ಜಯಂತಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಆ.೨೮ರಂದು ಜಿಲ್ಲಾಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ಗುರುತಿನ ಚೀಟಿ: ಕಲಾವಿದರ- ಕಲಾ ತಂಡಗಳ ಮಾಹಿತಿ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೈಲಿಂದ ಪರಾರಿಯಾಗಿದ್ದ ಖೈದಿ ೧೨ ವರ್ಷಗಳ ಬಳಿಕ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.