ಉದಯರಶ್ಮಿ ದಿನಪತ್ರಿಕೆ
ಅಥಣಿ: ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ದೈಹಿಕ ಸಾಮರ್ಥ್ಯ ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ೨೦೨೬-೨೭ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಅಥಣಿ ತಾಲೂಕಾ ಮಟ್ಟದ ಕ್ರೀಡಾಕೂಟ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಆ.೨೭ರಂದು ಬೆಳಿಗ್ಗೆ ೯:೩೦ಕ್ಕೆ ನಗರದ ಭೋಜರಾಜ ಕ್ರೀಡಾಂಗಣದಲ್ಲಿ ನಡೆಯಲಿದೆ.
ಎನ್ ಬಿ ಸಾಮಂತ ಪದವಿ ಪೂರ್ವ ಕಾಲೇಜು ರಡ್ಡೇರಹಟ್ಟಿ ಇವರ ನೇತೃತ್ವದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಸಹಕಾರ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎಮ್ ಎ ಚನ್ನಾಪೂರ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಲಿಂಗರಾಜು ಎನ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಪ ಪೂ ಚಿಕ್ಕೋಡಿ ಸಿದ್ದರಾಯ್ ಭೋಸಗಿ ತಹಶೀಲ್ದಾರ ಅಥಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಉಪನ್ಯಾಸಕರು ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
