ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಆರ್ಟ್ಸ್ ಮತ್ತು ಕೆ.ಸಿ.ಪಿ. ಸೈನ್ಸ್ ಕಾಲೇಜು “ಖೇಲ್ ಕಿ ಬಾತ್ ಪಿಎಂ ಮೋದಿ ಕೆ ಸಾಥ್”
ಖೇಲೋ ಇಂಡಿಯಾ ಸಂವಾದ ಆಯೋಜಿಸಲು ವಿಜಯಪುರದ ಕಾಲೇಜು ಆಯ್ಕೆಯಾಗಿದೆ.
ಖೇಲೋ ಇಂಡಿಯಾ ಸಂವಾದ – “ಖೇಲ್ ಕಿ ಬಾತ್ ಪಿಎಂ ಮೋದಿ ಕೆ ಸಾಥ್”
ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ಆಯೋಜಿಲಾಗಿದ್ದು,
ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಕ್ರೀಡಾ ಮನೋಭಾವ, ದೈಹಿಕ ಕ್ಷಮತೆ, ಶಿಸ್ತು, ತಂಡಭಾವನೆ ಮತ್ತು ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಭಾಗವಹಿಸಲು ಈ ಕಾರ್ಯಕ್ರಮವು ಉತ್ತಮ ಅವಕಾಶವನ್ನು ಒದಗಿಸಲಿದೆ.
ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ ಸಂಯೋಜಿತ ಕಾಲೇಜುಗಳು ತಮ್ಮ ಎನ್‌ಎಸ್‌ಎಸ್ ಸ್ವಯಂಸೇವಕರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದು ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.
