Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ
(ರಾಜ್ಯ ) ಜಿಲ್ಲೆ

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೭ನೇ ಜಯಂತಿ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ೩ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿದೆ.
ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ೩೧ ಸಾವಿರ ರೂ. ದ್ವಿತೀಯ ಬಹುಮಾನ ೨೧ ಸಾವಿರ ರೂ. ಮತ್ತು ತೃತೀಯ ಬಹುಮಾನ ೧೧ ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ ೩ ಸಾವಿರ ರೂ. ದ್ವಿತೀಯ ಬಹುಮಾನ ೨ ಸಾವಿರ ರೂ. ಮತ್ತು ತೃತೀಯ ಬಹುಮಾನ ೧ ಸಾವಿರ ರೂ. ಬಹುಮಾನ ನೀಡಲಾಗುವುದು.
ಪ್ರೌಢ ಶಾಲಾ ವಿಭಾಗದಲ್ಲಿ : ೧) ಗಾಂಧೀಜಿ ಕಲಿಸಿದ ಸರಳ ಜೀವನ-ಮಹಾನ್ ಸಂದೇಶ. ೨) ನಾನು ಗಾಂಧೀಜಿಯAತೆ ಸತ್ಯ ಹೇಳುವೆನು.
೩) ಗಾಂಧೀಜಿಯ ಜೀವನ ಕಥೆಯಿಂದ ಕಲಿಯುವ ಐದು ಪಾಠಗಳು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ೭೦೦ ರಿಂದ ೮೦೦ ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ : ೧) ಗಾಂಧೀಜಿಯ ದೃಷ್ಟಿಯಲ್ಲಿ ನಿಜವಾದ ಸ್ವಾತಂತ್ರ‍್ಯ
೨) ಸತ್ಯ ಮತ್ತು ಅಹಿಂಸೆ-ನನ್ನ ಜೀವನ ದಾರಿ. ೩) ಅಸಮಾನತೆ ನಿವಾರಣೆಗೆ ಗಾಂಧೀಜಿಯವರ ಕೊಡುಗೆ. ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ೯೦೦ ರಿಂದ ೧೦೦೦ ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ: ೧) ನೈತಿಕ ರಾಜಕಾರಣ-ಗಾಂಧೀಜಿಯ ತತ್ವಗಳ ಇಂದಿನ ಪ್ರಾಸಂಗಿಕತೆ. ೨) ಸತ್ಯಾಗ್ರಹ-ಇಂದಿನ ಕಾಲದ ಅವಶ್ಯಕತೆ ೩) ಗಾಂಧೀಜಿಯ ಶಿಕ್ಷಣ ತತ್ವ-ನೈತಿಕ,ಕೌಶಲ್ಯ ಹಾಗೂ ಸೇವಾಭಾವ.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ೧೪೦೦ ರಿಂದ ೧೫೦೦ ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಕಚೇರಿಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ ನಂತರ ಮೌಲ್ಯಮಾಪನ ಮಾಡಿ ದಿನಾಂಕ : ೦೮-೦೯-೨೦೨೬ರೊಳಗಾಗಿ ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಾಗುವುದು.
ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.
ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (೩) ಪ್ರಬಂಧಗಳಿಗೆ ಅಕ್ಟೋಬರ್ ೦೨ ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.
ನಿಬಂಧನೆಗಳು : ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಅಕರವಾಗಿ ಬಳಸಿದ ಪರಾಮರ್ಶನ / ಅಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾಯ್ದಿರಿಸಿಕೊಂಡಿರುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಮೊ: ೯೦೪೯೪೯೯೭೮೩ ಗೆ ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.