Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ

ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ

ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ಯಾನ್ಸರ್ ರೋಗದಿಂದ ಜಾಗೃತರಾಗಿರಬೇಕು :ಡಿಎಚ್ಒ ಡಾ.ಮಲ್ಲನಗೌಡ
(ರಾಜ್ಯ ) ಜಿಲ್ಲೆ

ಕ್ಯಾನ್ಸರ್ ರೋಗದಿಂದ ಜಾಗೃತರಾಗಿರಬೇಕು :ಡಿಎಚ್ಒ ಡಾ.ಮಲ್ಲನಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಬಾಯಿ, ಸ್ತನ ಹಾಗೂ ಗರ್ಭಕಂಠ ಕ್ಯಾನ್ಸರ್‌ಗಳ ಕುರಿತು ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಪರಿಸರ ಅಂಶಗಳು ಕ್ಯಾನ್ಸರ್ ಪ್ರಕರಣಗಳು ಹೆಚ್ಚಳಕ್ಕೆ ಕಾರಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಲ್ಲನಗೌಡ ಬಿರಾದಾರ ಅವರು ಹೇಳಿದರು.
​ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ ಸಭಾ ಭವನದಲ್ಲಿ ಗುರುವಾರ ಸಿಂದಗಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗಾಗಿ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿಯಮಿತ ವ್ಯಾಯಾಮ, ಆರೋಗ್ಯಕರ ಆಹಾರ, ತಂಬಾಕು ಹಾಗೂ ಮದ್ಯಪಾನ ತ್ಯಜಿಸುವುದರ ಜೊತೆಗೆ ಆರಂಭಿಕ ಹಂತದಲ್ಲೇ ರೋಗ ಪತ್ತೆ ಹಚ್ಚುವುದರಿಂದ ಕ್ಯಾನ್ಸರ್ ಅಪಾಯದಿಂದ ಪಾರಾಗಬಹುದು ಎಂದು ಸಲಹೆ ನೀಡಿದರು. ​ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಪ್ರಾದೇಶಿಕ ವ್ಯವಸ್ಥಾಪಕ ಡಾ. ಗುರುರಾಜ ಕುಲಕರ್ಣಿ ಮಾತನಾಡಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಬರಲು ಕಾರಣಗಳು ಹಾಗೂ ಅವುಗಳ ತಪಾಸಣಾ ವಿಧಾನಗಳ ಕುರಿತು ವಿವರಣೆ ನೀಡಿ, ಆಶಾ ಕಾರ್ಯಕರ್ತೆಯರಿಗೆ ಕ್ಯಾನ್ಸರ್ ಜಾಗೃತಿ ಕೈಪಿಡಿ ವಿತರಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅಪ್ಪಾಸಾಹೇಬ ಇನಾಮದಾರ ಮಾತನಾಡಿ, ಗೃಹ ಆರೋಗ್ಯ ಕಾರ್ಯಕ್ರಮದಡಿ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಸೂಚಿಸಿದರು.
​ಈ ಸಮಾರಂಭದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಿಇಒ ಡಾ. ಗುರು ಸುಹಾಸ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ಎನ್‌ಸಿಡಿ ಕಾರ್ಯಕ್ರಮ ಸಂಯೋಜಕಿ ಡಾ. ಪ್ರಿಯದರ್ಶನಿ ಪಾಟೀಲ, ಸಿಂದಗಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಎ. ಎ. ಮಾಗಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ. ಕೋಲೂರ, ಆಶಾ ಮೆಂಟರ್ ಮಲ್ಲಮ್ಮ, ತಾಲೂಕು ಶಿಕ್ಷಣಾಧಿಕಾರಿ ರೇಖಾ ದಶವಂತ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಿಂದಗಿ ತಾಲೂಕಿನ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ

ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ

ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ

ಕ್ರೀಡೆ: ಆರ್.ಡಿ.ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ
    In (ರಾಜ್ಯ ) ಜಿಲ್ಲೆ
  • ಕ್ರೀಡೆ: ಆರ್.ಡಿ.ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸೆ.೬ರಂದು ಎಚ್.ಟಿ.ಕುಲಕರ್ಣಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮುಳಸಾವಳಗಿಯಲ್ಲಿ ಭಕ್ತಿಭಾವ ಮೆರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ಪರಿಸರ ಸ್ನೇಹಿ ಗಣೇಶ ತಯಾರಿಕೆಯಲ್ಲಿ ಕಲಾವಿದರ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಸಂತ ಬಾಳು ಮಾಮಾ ಆದರ್ಶ & ಸಮಾಜಕ್ಕೆ ನೀಡಿದ ಸಂದೇಶ ನಮಗೆಲ್ಲ ಮಾದರಿ
    In (ರಾಜ್ಯ ) ಜಿಲ್ಲೆ
  • ಬರದ ನಾಡಿನ ಹಣೆಪಟ್ಟಿ ತೆಗೆಯಲು ಶ್ರಮಿಸಿದ್ದೇನೆ
    In (ರಾಜ್ಯ ) ಜಿಲ್ಲೆ
  • ​ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.