ಬಸವನಬಾಗೇವಾಡಿ: ಮಹಾಕಾವ್ಯ ರಾಮಾಯಣ ರಚಿಸುವ ಮೂಲಕ ಮಹರ್ಷಿ ವಾಲ್ಮೀಕಿ ಅಜರಾಮರವಾಗಿ ಉಳಿದುಕೊಂಡಿದ್ದಾರೆ. ಇಂತಹ ಮಹಾತ್ಮರ ಜೀವನವನ್ನು ವಿದ್ಯಾರ್ಥಿಗಳು ಅರಿತುಕೊಂಡು ತಮ್ಮ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕೆಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು.
ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿಯು ಸಂಘದೋಷದಿಂದ ತನ್ನ ವ್ಯಕ್ತಿತ್ವನ್ನು ಕಳೆದುಕೊಂಡಿದ್ದ. ಮುಂದೆ ಅವರು ನಾರದರ ಸಂಪರ್ಕದಿಂದ ಮಹಾನ್ ವ್ಯಕ್ತಿಯಾಗಿ ಶಕ್ತಿಯಾಗಿ ಬದಲಾಗಿ ಮಹಾಕಾವ್ಯ ರಾಮಾಯಣ ರಚನೆ ಮಾಡಿದರು. ವ್ಯಕ್ತಿಯ ಜೀವನದಲ್ಲಿ ಸಹ ಜೀವನ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ನಾವು ನಮ್ಮ ಬದುಕಿನಲ್ಲಿ ಉತ್ತಮ ಆಯ್ಕೆಗೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಉತ್ತಮ ಆಯ್ಕೆ ಮಾಡಿಕೊಂಡು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಅರ್ಥಶಾಸದ ವಿಭಾಗದ ಮುಖ್ಯಸ್ಥ ಡಾ.ರವೀಂದ್ರಗೌಡ ಕೆ., ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೈ.ನಾಯಕ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಡಿ.ಎಸ್.ಲಗಳಿ, ಡಾ.ಎಸ್.ಬಿ.ಜನಗೊಂಡ, ಎಂ.ಕೆ.ಯಾಧವ, ಎಸ್.ಡಿ.ಹನಮರಡ್ಡಿ, ವ್ಹಿ.ಎನ್.ರಜಪೂತ, ಪಿ.ಎಸ್.ಹೊರಕೇರಿ, ಎಸ್.ಜೆ.ಸೂರ್ಯವಂಶಿ, ಕಚೇರಿ ಮುಖ್ಯಸ್ಥ ಎಸ್.ಜಿ.ಪಾಟೀಲ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

