ಆ.೩೧ ರಂದು ಇಂಡಿಯಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಧರಣಿ ಎಚ್ಚರಿಕೆ
ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಇಲ್ಲವಾದಲ್ಲಿ ಆಗಸ್ಟ ೩೧ ಸೋಮವಾರದಿಂದ ನಗರದ ಆಡಳಿತ ಸೌಧ ಎದುರು ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ರೈತರನ್ನು ಸೇರಿಸಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ ಎಚ್ಚರಿಸಿದರು.
ತಾಲೂಕಿನಾದ್ಯಂತ ಭೀಕರ ಪರಿಸ್ಥಿತಿ ಇದ್ದರೂ ಸರ್ಕಾರ ಇಂಡಿ ತಾಲೂಕನ್ನು ಬರಗಾಲದ ಪಟ್ಟಿಗೆ ಸೇರಿಸದಿರುವುದು ದುರ್ದೈವ. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಇಂಡಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಸ್ಥಳೀಯ ಶಾಸಕ ಯಶವಂತ್ರಾಯಗೌಡರು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ವಿತರಿಸಲು ಕ್ರಮವಹಿಸಬೇಕು ಎಂದು ಬಿಜೆಪಿ ಮುಖಂಡರು ಬಲವಾಗಿ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಿದ್ದಲಿಂಗ ಹಂಜಗಿ, ಅನಿಲ ಜಮಾದಾರ, ಮಲ್ಲಿಕಾರ್ಜುನ ಕಿವುಡೆ, ಶೀಲವಂತ ಉಮರಾಣಿ, ದೇವೇಂದ್ರ ಕುಂಬಾರ, ರೈತ ಮೋರ್ಚಾ ಉಪಾಧ್ಯಕ್ಷ , ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಈರಣ್ಣಗೌಡ ಪಾಟೀಲ, ಜೆಟ್ಟು ಮರಡಿ, ನಾಗೇಶ ಹೆಗಡ್ಯಾಳ, ರಮೇಶ ಧರೇನವರ, ಮಹೇಶ ಹೂಗಾರ, ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

