ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು, ಯುವ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಪ್ರತಿದಿನ ಕ್ರೀಡಾಭ್ಯಾಸಕ್ಕಾಗಿ ಜಿಲ್ಲಾ ಕ್ರೀಡಾಂಗಣವನ್ನು ಅವಲಂಬಿಸಿದ್ದಾರೆ. ಆದರೆ ಕ್ರೀಡಾಂಗಣದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ, ಸಮರ್ಪಕ ನಿರ್ವಹಣೆಯ ಅಭಾವ ಹಾಗೂ ವಿವಿಧ ಶುಲ್ಕಗಳ ಹೆಚ್ಚಳದಿಂದಾಗಿ ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕ್ರೀಡಾಂಗಣವು ಕ್ರೀಡಾಪಟುಗಳ ಪ್ರತಿಭೆ ಬೆಳೆಸುವ ಕೇಂದ್ರವಾಗಬೇಕಾದರೆ, ಮೊದಲು ಅಲ್ಲಿನ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಬೇಕು ಎಂದು ಪರಿಷತ್ ಆಗ್ರಹಿಸಿದೆ.
ಕ್ರೀಡಾಪಟುಗಳಿಗೆ ಅಗತ್ಯವಿರುವ ಕ್ರೀಡಾ ಸಾಮಗ್ರಿಗಳನ್ನು ವೈಜ್ಞಾನಿಕ ಮಾನದಂಡಗಳಿಗೆ ಅನುಗುಣವಾಗಿ ಖರೀದಿಸಿ ಒದಗಿಸುವ ಮೂಲಕ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಮಾತನಾಡಿ, ಜಿಲ್ಲಾಡಳಿತ ಈ ಕುರಿತು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.
ಜಿಲ್ಲಾ ನಗರ ಘಟಕ ಅಧ್ಯಕ್ಷ ಹುಚ್ಚಪ್ಪ ಬಾವಿಮನಿ ಮತ್ತು ದಾವೂದ್ ನಾಯ್ಕೋಡಿ, ಪ್ರಭು ಹೊಸಮನಿ, ಮಂಜು ಶಿವು ಸುದೀಪ ವಿಶ್ವನಾಥ ಚೇತನ ಗಿರೀಶ ಪವನ ಹಣಮಂತ ಸಾಗರ ಅಮಿತಾ ವೀರೇಶ ಕಾರ್ತಿಕ ರಾಮು ವಿಜಯಕುಮಾರ್ ಆಕಾಶ ಹರೀಶ ಇತರರು ಉಪಸ್ಥಿತರಿದ್ದರು.

