ಬಸವನಬಾಗೇವಾಡಿ: ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕರುನಾಡು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಸಹಯೋಗದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದಂಗವಾಗಿ ನ. ೧ ರಂದು ಮಧ್ಯಾನ್ಹ ೨ ಗಂಟೆಗೆ ರಾಜ್ಯಮಟ್ಟದ ಕರುನಾಡು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ, ನೂತನ ಪದಾಧಿಕಾರಿಗಳ ಪದಗ್ರಹಣ, ಕವಿಗೋಷ್ಠಿ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಂ.ಬಿ.ವಗ್ಗರ ವಹಿಸುವರು.ಹಂಗರಗಿಯ ಚನ್ನಬಸವ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಶಿವರುದ್ರಯ್ಯ ಹಿರೇಮಠ ಅವರು ನಾಡದೇವಿಗೆ ಪುಷ್ಪಾರ್ಚನೆ ನೆರವೇರಿಸುವರು. ಶಿಕ್ಷಕ ಸಾಹಿತಿ ಮಶ್ಯಾಕ ಗೌಂಡಿ ಉಪನ್ಯಾಸ ನೀಡುವರು. ಅತಿಥಿಗಳಾಗಿ ಮಹಾಂತೇಶ ಸಂಗಮ, ಆರ್.ಜಿ.ಅಳ್ಳಗಿ, ಈರಣ್ಣ ಮರ್ತುರ, ಗಿರಿಜಾ ಪಾಟೀಲ, ದೇವೇಂದ್ರ ಗೋನಾಳ, ಪ್ರಭಾಕರ ಖೇಡದ, ಎನ್.ಎಸ್.ಹೂಗಾರ, ಶಿವಪುತ್ರ ಅಜಮನಿ ಆಗಮಿಸುವರು ಎಂದು ಕರುನಾಡು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಅಸ್ಲಂ ಶೇಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment